Select Your Language

Notifications

webdunia
webdunia
webdunia
webdunia

ಉಕ್ರೇನ್ನಿಂದ ಬಂದ ಕರ್ನಾಟಕ ವಿದ್ಯಾರ್ಥಿಗಳ ಭವಿಷ್ಯ ಏನು?

ಉಕ್ರೇನ್ನಿಂದ ಬಂದ ಕರ್ನಾಟಕ ವಿದ್ಯಾರ್ಥಿಗಳ ಭವಿಷ್ಯ ಏನು?
ಬೆಂಗಳೂರು , ಮಂಗಳವಾರ, 8 ಮಾರ್ಚ್ 2022 (17:22 IST)
ಬೆಂಗಳೂರು : ಉಕ್ರೇನ್ನಿಂದ ಬಂದಿರುವ ಕರ್ನಾಟಕದ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ವಿಧಾನಸಭೆಯಲ್ಲಿ ಪ್ರತಿಪಕ್ಷದ ಉಪ ನಾಯಕ ಯುಟಿ ಖಾದರ್ ಪ್ರಸ್ತಾಪಿಸಿದ್ದಾರೆ.

ಉಕ್ರೇನ್ನಲ್ಲಿ ಹಾವೇರಿ ಮೂಲದ ವಿದ್ಯಾರ್ಥಿ ನವೀನ್ನನ್ನು ಕಳೆದುಕೊಂಡಿದ್ದೇವೆ. ಉಕ್ರೇನ್ನಿಂದ ಬಂದ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಭವಿಷ್ಯದ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಖಾದರ್ ಆಗ್ರಹಿಸಿದರು.

ರಾಜೀವ್ ಗಾಂಧಿ ವಿವಿ ಜೊತೆಗೆ ಸರ್ಕಾರ ಚರ್ಚೆ ಮಾಡಿದರೆ ಪರಿಹಾರ ಸಾಧ್ಯವಿದೆ. ನೀಟ್ನಲ್ಲೂ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂಬ ಭಾವನೆ ಇದೆ.

ಇದನ್ನು ಸರ್ಕಾರ ವಿಮರ್ಶೆ ಮಾಡಬೇಕು. 1,000 ರ್ಯಾಂಕ್ಗಳಲ್ಲಿ 50 ವಿದ್ಯಾರ್ಥಿಗಳು ಕೂಡಾ ನಮ್ಮ ರಾಜ್ಯದವರಲ್ಲ. ನಮ್ಮ ವಿದ್ಯಾರ್ಥಿಗಳಲ್ಲಿ ಇಷ್ಟು ಟ್ಯಾಲೆಂಟ್ ಇದ್ದರೂ ಏಕೆ ಸಿಗುತ್ತಿಲ್ಲ ಎಂದು ಪ್ರಶ್ನಿಸಿದರು. 

ಉಕ್ರೇನ್ನಿಂದ ಬಂದವರ ಶಿಕ್ಷಣದ ಭವಿಷ್ಯದ ಬಗ್ಗೆ ರಾಜೀವ್ ಗಾಂಧಿ ವಿವಿ ಉಪ ಕುಲಪತಿ ಜೊತೆಗೆ ಸಭೆ ನಡೆಸಲಾಗಿದೆ. ನಾವು ಇಲ್ಲಿ ಯಾವ ರೀತಿ ನ್ಯಾಷನಲ್ ಮೆಡಿಕಲ್ ಕೌನ್ಸಿಲ್ನಲ್ಲಿ ನೀಟ್ಗೆ ಶಿಫಾರಸು ಮಾಡಬೇಕು ಎಂದು ಚರ್ಚೆ ನಡೆಸಿದ್ದೇವೆ. ನೀಟ್ ಕೋಚಿಂಗ್ ವಿದ್ಯಾರ್ಥಿಗಳಿಗೆ ಸರ್ಕಾರವೇ ಕೊಡುವ ನಿಟ್ಟಿನಲ್ಲಿ ತೀರ್ಮಾನ ಮಾಡಿದೆ.

ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಶೇ.50 ಸರ್ಕಾರಿ ಫೀಸ್ ತೆಗೆದುಕೊಳ್ಳುವಂತೆ ಪ್ರಧಾನಿ ಕೂಡಾ ಘೋಷಣೆ ಮಾಡಿದ್ದಾರೆ ಎಂದು ಸುಧಾಕರ್ ಸ್ಪಷ್ಟನೆ ನೀಡಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಪಂಚರಾಜ್ಯ ವಿಧಾನಸಭಾ ಚುನಾವಣೆ ಬಗ್ಗೆ ಸಿಎಂ ಹೇಳಿದ್ದೇನು