Webdunia - Bharat's app for daily news and videos

Install App

ಜೈಲು ಹಕ್ಕಿಗಳಿಗಿಲ್ಲ ಬಿಡುಗಡೆ ಭಾಗ್ಯ ಕಾರಣ ಏನು?

Webdunia
ಶುಕ್ರವಾರ, 16 ಆಗಸ್ಟ್ 2019 (16:42 IST)
ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಆಗದೆ ಇರುವುದರಿಂದ ಇದರ ಬಿಸಿ ಕಾರಾಗೃಹದಲ್ಲಿನ ಜೈಲು ಹಕ್ಕಿಗಳಿಗೂ ತಟ್ಟಿದೆ.

ಸನ್ನಡತೆ ಆಧಾರದ ಮೇಲೆ ಆಗಸ್ಟ್ 15 ರಂದು ಜೈಲುವಾಸದಿಂದ ಹೊರಬರಬೇಕಿದ್ದ ಸುಮಾರು ನೂರಾರು ಕೈದಿಗಳಿಗೆ ಬಿಡುಗಡೆ ಭಾಗ್ಯವಿಲ್ಲದಂತಾಗಿದೆ.

ಸಾಮಾನ್ಯವಾಗಿ ಆಗಸ್ಟ್ 15ರ ಸ್ವಾತಂತ್ರ್ಯೋತ್ಸವ ಮತ್ತು ಜನವರಿ 26ರ ಗಣರಾಜ್ಯೋತ್ಸವ ದಿನದಂದು ಸನ್ನಡತೆ ಹಾಗೂ‌ ಮನ ಪರಿವರ್ತನೆಗೊಂಡ ಕೈದಿಗಳನ್ನ ಶಿಕ್ಷೆಯ ಅವಧಿಗೆ ಮುನ್ನವೇ ಬಿಡುಗಡೆ ಮಾಡಲಾಗುತ್ತದೆ. ಸಚಿವ ಸಂಪುಟ ಶಿಫಾರಸು ಹಾಗೂ ರಾಜ್ಯಪಾಲರ ಅನುಮತಿಯಂತೆ ಕೈದಿಗಳ ಬಂಧ ಮುಕ್ತಗೊಳಿಸುವ ಪರಿಪಾಠ ಬೆಳೆದುಬಂದಿದೆ. ಆದರೆ ರಾಜ್ಯದಲ್ಲಿ ರಾಜಕೀಯ ಅಸ್ಥಿರತೆಯಿಂದ ಸರ್ಕಾರದ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆ ಆಗದೇ ಇರುವುದರಿಂದ ಕೈದಿಗಳ ಬಿಡುಗಡೆ ಬಗ್ಗೆ ಆಡಳಿತ ಸರ್ಕಾರ ಹೆಚ್ಚು ತಲೆಕೆಡಿಸಿಕೊಂಡಿಲ್ಲ.

ಸ್ವಾತಂತ್ರ್ಯ ದಿನದಂದು ಸನ್ನಡತೆ ಕೈದಿಗಳ ಬಿಡುಗಡೆಗೆ ಜೂನ್​​-ಜಲೈ ತಿಂಗಳಿನಿಂದಲೇ ಸಂಬಂಧಪಟ್ಟ ಪ್ರಕ್ರಿಯೆ ಆರಂಭವಾಗುತ್ತದೆ. ಜುಲೈ ತಿಂಗಳಲ್ಲಿನ ರಾಜಕೀಯ ಬದಲಾವಣೆಯಿಂದ ಸಮರ್ಪಕವಾಗಿ ಸಚಿವ ಸಂಪುಟ ಸಭೆ ನಡೆಯದೆ, ಹೊಸದಾಗಿ ಆಡಳಿತಕ್ಕೆ ಬಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸಹ ಕೈದಿಗಳ ಬಿಡುಗಡೆ ಕುರಿತು ಇದುವರೆಗೆ ಹೆಚ್ಚಿನ ಗಮನಹರಿಸಿಲ್ಲ. ಬಂಧಿಖಾನೆ ಮತ್ತು ಗೃಹ ರಕ್ಷಕ ಇಲಾಖೆಯ ಬಿಡುಗಡೆಗೆ ಅರ್ಹತೆ ಪಡೆದಿರುವ ಕೈದಿಗಳ ಪಟ್ಟಿಯನ್ನ ಸಿದ್ಧಪಡಿಸಿ ಇಟ್ಟುಕೊಂಡಿದೆ.

ಇದಕ್ಕೆ ಸಚಿವ ಸಂಪುಟದ ಅನುಮೋದನೆಯ ಅಗತ್ಯತೆ ಇದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 15 ದಿನಗಳ ಮೇಲಾದರೂ ಕೂಡ ಸಚಿವ ಸಂಪುಟ ವಿಸ್ತರಣೆ ಆಗದೇ ಇರುವುದರಿಂದ ಕೈದಿಗಳ ಬಿಡುಗಡೆ ಕಡತ ಸಂಪುಟ ಸಭೆಯ ಅನುಮೋದನೆಗೆ ಬರಲು ಸಾಧ್ಯವಾಗಿಲ್ಲ. ಸಂಪುಟದ ಸಮ್ಮತಿ ಸಿಗದೇ ಇರುವುದರಿಂದ ರಾಜಭವನಕ್ಕೂ ಕೈದಿಗಳ ಪಟ್ಟಿಯನ್ನ ಇಲಾಖೆ ಕಳಿಸಿಲ್ಲ. ಹಾಗಾಗಿ ಸ್ವಾತಂತ್ರ್ಯೋತ್ಸವ ದಿನದಂದು ಸನ್ನಡತೆಯುಳ್ಳ ಕೈದಿಗಳಿಗೆ ಅಕ್ಷರಶಃ ಸ್ವಾತಂತ್ರ್ಯ ಇಲ್ಲವಾದಂತಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments