ಗ್ಯಾರಂಟಿ ಸಮಿತಿ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ನೀಡಿದ ದೂರಿನಲ್ಲೇನಿದೆ

Krishnaveni K
ಬುಧವಾರ, 12 ಮಾರ್ಚ್ 2025 (17:34 IST)
ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಂದ ಶಾಸಕರ ಹಕ್ಕು ಮೊಟಕುಗೊಳಿಸುವ ಕೆಲಸ ಆಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.

ಮಾನ್ಯ ರಾಜ್ಯಪಾಲರನ್ನು ಇಂದು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಬಿಜೆಪಿ- ಜೆಡಿಎಸ್ ನಿಯೋಗವು ಇಂದು ಗೌರವಾನ್ವಿತ ರಾಜ್ಯಪಾಲರನ್ನು ಭೇಟಿ ಮಾಡಿದೆ. ಗ್ಯಾರಂಟಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಅಧ್ಯಕ್ಷರನ್ನು ನೇಮಿಸಿದ್ದು ಇದು ಸಂಪೂರ್ಣವಾಗಿ ರಾಜ್ಯದ ಕಾಂಗ್ರೆಸ್ ಸರಕಾರದ ಅಸಾಂವಿಧಾನಿಕ ನಡೆ ಎಂಬುದನ್ನು ಗೌರವಾನ್ವಿತ ರಾಜ್ಯಪಾಲರ ಗಮನಕ್ಕೆ ತಂದಿದ್ದೇವೆ ಎಂದು ತಿಳಿಸಿದರು.

ರಾಜ್ಯದ ಜನರ ತೆರಿಗೆ ಹಣದ ದುರುಪಯೋಗ ಆಗಿದೆ ಎಂದು ಮನದಟ್ಟು ಮಾಡಲಾಗಿದೆ ಎಂದರು. ಈ ಸರಕಾರಕ್ಕೆ ತಿಳಿಹೇಳುವ ಕೆಲಸ ಮಾಡುವಂತೆ ಹಾಗೂ ಮಧ್ಯಸ್ಥಿಕೆ ವಹಿಸಲು ಮನವಿ ಮಾಡಿದ್ದಾಗಿ ತಿಳಿಸಿದರು. 

ನನ್ನ ವಿಧಾನಸಭಾ ಕ್ಷೇತ್ರದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರು, ಶಾಲೆ ಮತ್ತು ಕಾಲೇಜುಗಳ ಉಸ್ತುವಾರಿ ಸಮಿತಿಗಳಿಗೆ ಶಿಕಾರಿಪುರ ತಾಲ್ಲೂಕಿನ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು ಕೊಟ್ಟ ಹೆಸರನ್ನು ಪರಿಗಣಿಸಲು ಸೂಚಿಸಿದ್ದಾರೆ. ಇಂಥ ಕೆಲಸ ಬೇರೆ ಕಡೆಯೂ ನಡೆಯುತ್ತಿದೆ. ಈ ಸಂಬಂಧ ಸದನದಲ್ಲಿ ಹಕ್ಕುಚ್ಯುತಿಯನ್ನು ಮಂಡಿಸಲಿದ್ದೇವೆ ಎಂದು ತಿಳಿಸಿದರು. ಸಚಿವರಿಂದ ಶಾಸಕರ ಹಕ್ಕು ಮೊಟಕುಗೊಳಿಸುವ ಕೆಲಸ ಆಗುತ್ತಿದೆ ಎಂದು ಟೀಕಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮೋಮೋಸ್ ಮಾರಿ ತಿಂಗಳಿಗೆ 31 ಲಕ್ಷ ಸಂಪಾದನೆ: ಬೆಂಗಳೂರಿನ ಬೀದಿ ಬದಿ ವ್ಯಾಪಾರಿ ಅಷ್ಟು ಫೇಮಸ್ ಅಂತೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments