Publish Date: Tue, 16 Jan 2018 (10:57 IST)
Updated Date: Tue, 16 Jan 2018 (11:06 IST)
ಬೆಂಗಳೂರು: ಮಹದಾಯಿ ವಿವಾದಕ್ಕೆ ಸಂಬಂದಿಸಿದಂತೆ ಗೋವಾ ಜಲಸಂಪನ್ಮೂಲ ಸಚಿವ ವಿನೋದ್ ಪಾಲೇಕರ್ ಕರ್ನಾಟಕದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಅವರು ಗೋವಾ ಸಚಿವರಿಗೆ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ನಮ್ಮ ನಾಡು, ನುಡಿ, ನೆಲ ನಮಗೆ ಪ್ರಥಮ. ನಿಮ್ಮಂತವರು ಸಾವಿರ ಬಂದರು ನಮ್ಮನ್ನು ಬಗ್ಗಿಸಲಾಗದು. ಮಹದಾಯಿ ನಮ್ಮ ಹಕ್ಕು, ಭಿಕ್ಷೆಯಲ್ಲ’. ಎಂದು ಗೋವಾ ಸಚಿವರ ವಿರುದ್ಧ ಸಚಿವ ಎಂ.ಬಿ. ಪಾಟೇಲ್ ಅವರು ಕಿಡಿಕಾರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ