Select Your Language

Notifications

webdunia
webdunia
webdunia
Saturday, 12 April 2025
webdunia

ಹೊಸದಾಗಿ ಅಂಗನವಾಡಿ ಕಾರ್ಯಕರ್ತೆಯರ ಕೈಗೆ ಸಿಗೋದೇನು?

ಅಂಗನವಾಡಿ
ಚಿಕ್ಕೋಡಿ , ಮಂಗಳವಾರ, 25 ಫೆಬ್ರವರಿ 2020 (15:31 IST)
ರಾಜ್ಯದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಕೈಗೆ ಹೊಸದಾಗಿ ಮಾರ್ಚ್ 1 ರಿಂದ ಸಿಗಲಿದೆ.  
 

ರಾಜ್ಯದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ನೀಡಲಾಗುವದು. ಮೊಬೈಲ್  ಮುಖಾಂತರ ಎಲ್ಲಾ ಅಂಗನವಾಡಿ ಮಕ್ಕಳ ಆರೋಗ್ಯದ ಬಗ್ಗೆ ಮಾಹಿತಿ ಪಡೆಯಲು ಸಹಕಾರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಚಿಕ್ಕೋಡಿಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮುಂದಿನ 3 ವರ್ಷದಲ್ಲಿ ರಾಷ್ಟ್ರೀಯ ಪೋಷಣಾ ಅಭಿಯಾನ ಕಾರ್ಯಕ್ರಮವನ್ನು ಸರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಕರ್ನಾಟಕ ರಾಜ್ಯವನ್ನು ಇಡೀ ದೇಶಕ್ಕೆ ಮಾದರಿ ಮಾಡಲಾಗುವದು ಎಂದರು.

ಸ್ತ್ರೀ ಶಕ್ತಿ ಸಂಘ ರಚನೆ ಮಾಡಿದರೆ ಸಾಲದು. ಎಲ್ಲಾ ಮಹಿಳೆಯರಿಗೆ ತಮ್ಮ ಸ್ವಂತ ಉದ್ಯೋಗ ಹೊಂದುವ ತರಬೇತಿ ನೀಡಲಾಗುವದು. ಮುಂದಿನ ದಿನಗಳಲ್ಲಿ ಮಹಿಳೆಯರು ಬೇಡುವ ಕೈವಾಗಬಾರದು. ಕೊಡುವ ಕೈ ಆಗುವಂತೆ ತರಬೇತಿ ನೀಡಲಾಗುವದು ಎಂದರು.




Share this Story:

Follow Webdunia kannada

ಮುಂದಿನ ಸುದ್ದಿ

ಪುಟ್ಟ ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಪಾಪಿ ತಂದೆ