Publish Date: Sat, 26 Nov 2016 (19:49 IST)
Updated Date: Sat, 26 Nov 2016 (19:50 IST)
ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳಲು ಒಬಿಸಿ ಸಮಾವೇಶ ನಡೆಸುತ್ತಿಲ್ಲ. ಎಲ್ಲಾ ದುರ್ಬಲ ವರ್ಗಗಳ ಸಮುದಾಯಗಳನ್ನು ಒಂದು ಕಡೆ ಸೇರಿಸಬೇಕು ಎನ್ನುವ ಉದ್ದೇಶದಿಂದ ಸಮಾವೇಶ ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಒಬಿಸಿಗೆ ಅಹಿಂದ ನಾಯಕರು ಏನು ಮಾಡಿದ್ದಾರೆ ತೋರಿಸಲಿ. ಸಿಎಂ ಸಿದ್ದರಾಮಯ್ಯಗೆ ಸವಾಲ್ ಹಾಕಿದ ಅವರು, ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳಲು ಹತ್ತಿರದಲ್ಲಿ ಚುನಾವಣೆಗಳಿಲ್ಲ ಎಂದು ವಿರೋಧಿಗಳಿಗೆ ತಿರುಗೇಟು ನೀಡಿದರು.
ಕಾಂಗ್ರೆಸ್ ಪಕ್ಷ ಹಿಂದುಳಿದ ವರ್ಗದವರನ್ನು ಮತಬ್ಯಾಂಕ್‌ಗಾಗಿ ಮಾತ್ರ ಓಲೈಸುತ್ತದೆ. ಹಿಂದುಳಿದ ವರ್ಗದವರ ಏಳಿಗೆಗಾಗಿ ಯಾವುದೇ ಕೆಲಸ ಮಾಡಿಲ್ಲ. ಬಿಜೆಪಿ ಪಕ್ಷ ಹಿಂದುಳಿದ ವರ್ಗದವರ ಏಳಿಗೆಗಾಗಿ ದುಡಿಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಸಿಎಂ ಸಿದ್ದರಾಮಯ್ಯ ತಾವೇ ಅಹಿಂದ ಮುಖ್ಯಸ್ಥರು ಎನ್ನುವಂತೆ ವರ್ತಿಸುತ್ತಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ ಅಹಿಂದ ಸಂಘಟನೆಯನ್ನು ಮರೆತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.