ಅಹಿಂದ ವರ್ಗಕ್ಕೆ ಏನು ಮಾಡಿದ್ದೀರಿ: ಸಿಎಂ ಸಿದ್ದರಾಮಯ್ಯಗೆ ಯಡಿಯೂರಪ್ಪ ಸವಾಲ್

Webdunia
ಶನಿವಾರ, 26 ನವೆಂಬರ್ 2016 (19:49 IST)
ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳಲು ಒಬಿಸಿ ಸಮಾವೇಶ ನಡೆಸುತ್ತಿಲ್ಲ. ಎಲ್ಲಾ ದುರ್ಬಲ ವರ್ಗಗಳ ಸಮುದಾಯಗಳನ್ನು ಒಂದು ಕಡೆ ಸೇರಿಸಬೇಕು ಎನ್ನುವ ಉದ್ದೇಶದಿಂದ ಸಮಾವೇಶ ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. 
 
ಒಬಿಸಿಗೆ ಅಹಿಂದ ನಾಯಕರು ಏನು ಮಾಡಿದ್ದಾರೆ ತೋರಿಸಲಿ. ಸಿಎಂ ಸಿದ್ದರಾಮಯ್ಯಗೆ ಸವಾಲ್ ಹಾಕಿದ ಅವರು, ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳಲು ಹತ್ತಿರದಲ್ಲಿ ಚುನಾವಣೆಗಳಿಲ್ಲ ಎಂದು ವಿರೋಧಿಗಳಿಗೆ ತಿರುಗೇಟು ನೀಡಿದರು.
 
ಕಾಂಗ್ರೆಸ್ ಪಕ್ಷ ಹಿಂದುಳಿದ ವರ್ಗದವರನ್ನು ಮತಬ್ಯಾಂಕ್‌ಗಾಗಿ ಮಾತ್ರ ಓಲೈಸುತ್ತದೆ. ಹಿಂದುಳಿದ ವರ್ಗದವರ ಏಳಿಗೆಗಾಗಿ ಯಾವುದೇ ಕೆಲಸ ಮಾಡಿಲ್ಲ. ಬಿಜೆಪಿ ಪಕ್ಷ ಹಿಂದುಳಿದ ವರ್ಗದವರ ಏಳಿಗೆಗಾಗಿ ದುಡಿಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.
 
ಸಿಎಂ ಸಿದ್ದರಾಮಯ್ಯ ತಾವೇ ಅಹಿಂದ ಮುಖ್ಯಸ್ಥರು ಎನ್ನುವಂತೆ ವರ್ತಿಸುತ್ತಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ ಅಹಿಂದ ಸಂಘಟನೆಯನ್ನು ಮರೆತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.    
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ನ್ಯಾಷನಲ್ ಹೆರಾಲ್ಡ್‌ ಪ್ರಕರಣ, ಸೋನಿಯಾ, ರಾಹುಲ್ ಗಾಂಧಿಗೆ ಬಿಗ್‌ ರಿಲೀಫ್‌

ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು: ಸಚಿವ ಮಧು ಬಂಗಾರಪ್ಪ

ವಿಮಾನ ಮಹಿಳಾ ಸಿಬ್ಬಂದಿ ಜತೆ ಅನುಚಿತ ವರ್ತನೆ, ವೃದ್ಧ ಪ್ರಯಾಣಿಕನ ವಿರುದ್ಧ ದೂರು

ಯಮುನಾ ಎಕ್ಸ್‌ಪ್ರೆಸ್‌ವೇ ಅಪಘಾತ, ಮೃತ 13 ಮಂದಿ ಕುಟುಂಬಕ್ಕೆ ಯೋಗಿ ₹2 ಲಕ್ಷ ಪರಿಹಾರ ಘೋಷಣೆ

ಮುಂದಿನ ಸುದ್ದಿ
Show comments