Select Your Language

Notifications

webdunia
webdunia
webdunia
webdunia

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

Siddaramaiah-DK Shivakumar

Krishnaveni K

ಬೆಂಗಳೂರು , ಮಂಗಳವಾರ, 20 ಮೇ 2025 (10:18 IST)
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗಿ ಜನ ಪರದಾಡುತ್ತಿದ್ದರೆ ಅತ್ತ ಕಾಂಗ್ರೆಸ್ ಇಂದು ಹೊಸಪೇಟೆಯಲ್ಲಿ ರಾಜ್ಯ ಸರ್ಕಾರಕ್ಕೆ ಎರಡು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಸಾಧನಾ ಸಮಾವೇಶ ಮಾಡಲು ಮುಂದಾಗಿದೆ. ಬೆಂಗಳೂರು ಮುಳುಗಿರುವಾಗ ಈ ಸಾಧನಾ ಸಮಾವೇಶ ಯಾಕೋ ಎಂದು ವಿಪಕ್ಷ ಬಿಜೆಪಿ ಟೀಕೆ ಮಾಡಿದೆ.

ಹೊಸಪೇಟೆಯಲ್ಲಿ ಇಂದು ಅದ್ಧೂರಿಯಾಗಿ ಕಾಂಗ್ರೆಸ್ ಸಾಧನಾ ಸಮಾವೇಶ ಆಯೋಜಿಸಿದೆ. ಎರಡು ವರ್ಷಗಳಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ನಾವು ಸಾಧನೆ ಮಾಡಿದ್ದೇವೆ ಎಂದು ಕಾಂಗ್ರೆಸ್ ಬಿಂಬಿಸುತ್ತಿದೆ. ಇದೇ ವಿಚಾರವನ್ನಿಟ್ಟುಕೊಂಡು ಇಂದು ಹೊಸಪೇಟೆಯಲ್ಲಿ ಭರ್ಜರಿ ಸಮಾವೇಶ ಮಾಡಲಾಗುತ್ತಿದೆ.

ಒಂದೆಡೆ ಗ್ಯಾರಂಟಿ ಯೋಜನೆಗಳೇ ಸರಿಯಾಗಿ ಜನರಿಗೆ ತಲುಪುತ್ತಿಲ್ಲ. ಗೃಹಲಕ್ಷ್ಮಿ ಯೋಜನೆ ಹಣ ಮೂರು ತಿಂಗಳಿನಿಂದ ಬಾಕಿಯಿದೆ. ಇನ್ನೊಂದೆಡೆ ಬೆಂಗಳೂರಿನಲ್ಲಿ ಮಳೆ ನೀರಿನಿಂದ ಅವ್ಯವಸ್ಥೆಯ ಆಗರವಾಗಿದೆ. ಈ ಸಂದರ್ಭದಲ್ಲಿ ಸಾಧನೆ ಮಾಡಿದ್ದೇವೆ ಎಂಬ ಹೆಸರಿನಲ್ಲಿ ಸಮಾವೇಶ ಮಾಡುವುದಕ್ಕೆ ಅರ್ಥವಿದೆಯೇ ಎಂದು ಬಿಜೆಪಿ ನಾಯಕರು ಹಾಗೂ ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್