ಡಿಕೆಶಿ ಗೈರು ಗಮನಿಸಿದಾಗ ಯಾವ ಕ್ಷಣದಲ್ಲೂ ಸರ್ಕಾರ ಪತನವಾಗುವ ಸಾಧ್ಯತೆಯಿದೆ: ಜಗದೀಶ್ ಶೆಟ್ಟರ್‌

Sampriya
ಶುಕ್ರವಾರ, 3 ಜನವರಿ 2025 (17:04 IST)
Photo Courtesy X
ಬೆಳಗಾವಿ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಮಧ್ಯೆ ಈಗಾಗಲೇ ಆಂತರಿಕ ತಿಕ್ಕಾಟ ಶುರುವಾಗಿದ್ದು, ಇದು ಯಾವುದೇ ಕ್ಷಣದಲ್ಲೂ ಸ್ಫೋಟವಾಗಿ ಸರ್ಕಾರ ಪತನವಾಗುವ ಸಾಧ್ಯತೆಯಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದ್ದಾರೆ.

ಬೆಂಗಳೂರಿನಲ್ಲಿ ಸಚಿವ ಸತೀಶ ಜಾರಕಿಹೊಳಿ ನಿವಾಸದಲ್ಲಿ ಗುರುವಾರ ರಾತ್ರಿ ಔತಣಕೂಟ ನಡೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಉದ್ಭವವಾಗಿರುವ ಆಂತರಿಕ ತಿಕ್ಕಾಟದಿಂದ ನಾಳೆ ಸರ್ಕಾರದ ಮೇಲೆ ಪರಿಣಾಮ ಬೀಳುವ ಸಾಧ್ಯತೆಯಿದೆ ಎಂದರು.

ಡಿ.ಕೆ.ಶಿವಕುಮಾರ್‌ ವಿದೇಶ ಪ್ರವಾಸಕ್ಕೆ ಹೋದಾಗ, ಸತೀಶ ಜಾರಕಿಹೊಳಿ ಮನೆಗೆ ಸಿದ್ದರಾಮಯ್ಯ ಹೋಗಿದ್ದಾರೆ. ಅದಲ್ಲದೆ ಕೆಪಿಸಿಸಿ ಅಧ್ಯಕ್ಷರು ಬದಲಾಗಬೇಕು ಎಂದು ಸತೀಶ ಹೇಳಿರುವುದು, ಔತಣಕೂಟ ಆಯೋಜಿಸುವುದು, ಅದಕ್ಕೆ ಡಿಸಿಎಂ ಗೈರು ಆಗುವುದನ್ನು ಗಮನಿಸಿದರೆ, ರಾಜ್ಯ ಸರ್ಕಾರ ಉತ್ತಮ ರೀತಿಯಲ್ಲಿ ನಡೆಯುತ್ತಿಲ್ಲ ಎಂಬುದಕ್ಕೆ ನಿದರ್ಶನ ಎಂದರು.

ಬಹುಮತ ಇದೆ ಎಂಬ ಕಾರಣಕ್ಕೆ ಕಾಂಗ್ರೆಸ್‌ ಸರ್ಕಾರ ಹೇಗೋ ನಡೆದಿದೆ. ಆದರೆ, ಸ್ವತಃ ಕಾಂಗ್ರೆಸ್‌ನ ಶಾಸಕರೇ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಅಭಿವೃದ್ಧಿ ಕೆಲಸ ನಿಂತುಹೋಗಿದೆ. ಹತ್ತಾರು ಸಾವಿರ ಕೋಟಿ ರೂಪಾಯಿ ಬಿಲ್‌ ಪಾವತಿಯಾಗದೆ ಗುತ್ತಿಗೆದಾರರು ಒತ್ತಡದಲ್ಲಿದ್ದಾರೆ ಎಂದು ದೂರಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್: ಖಾತೆ ಚೆಕ್ ಮಾಡಿಕೊಳ್ಳಿ

ಬೆಂಗಳೂರಿನಿಂದ ಮಂಗಳೂರಿಗೆ ಹಗಲು ಸಂಚರಿಸುವ ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮೋಮೋಸ್ ಮಾರಿ ತಿಂಗಳಿಗೆ 31 ಲಕ್ಷ ಸಂಪಾದನೆ: ಬೆಂಗಳೂರಿನ ಬೀದಿ ಬದಿ ವ್ಯಾಪಾರಿ ಅಷ್ಟು ಫೇಮಸ್ ಅಂತೆ

ಮುಂದಿನ ಸುದ್ದಿ
Show comments