Select Your Language

Notifications

webdunia
webdunia
webdunia
webdunia

ಬಿಬಿಎಂಪಿ ಚುನಾವಣೆ ದಿನಾಂಕ ನಿಗದಿ ಯಾವಾಗ?

When is the BBMP election date set?
bangalore , ಗುರುವಾರ, 7 ಅಕ್ಟೋಬರ್ 2021 (20:40 IST)
ಅಂತೂ ಇಂತೂ ಬಿಬಿಎಂಪಿ ಚುನಾವಣೆಗೆ ಹಿಡಿದಿದ್ದ ಗ್ರಹಣ ಬಿಡುವ ಮುನ್ಸೂಚನೆಗಳು ಕಂಡು ಬರುತ್ತಿವೆ. ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ತ್ರಿಸದಸ್ಯ ಪೀಠ ನಾಲ್ಕು ವಾರಗಳ ನಂತರ ಬಿಬಿಎಂಪಿ ಚುನಾವಣೆ ವಿಚಾರಣೆಯನ್ನು ಕೈಗೆತ್ತಿಕೊಂಡು ಅಂತಿಮ ತೀರ್ಪು ನೀಡುವ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಬರುವ ಜನವರಿ ಇಲ್ಲವೇ ಫೆಬ್ರವರಿಯಲ್ಲಿ ಬಿಬಿಎಂಪಿಗೆ ಚುನಾವಣೆ ನಡೆಯುವ ಸಾಧ್ಯತೆಗಳು ಗೋಚರಿಸುತ್ತಿವೆ.
 
ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ಹಾಗೂ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾಕೊಹ್ಲಿ ನೇತೃತ್ವದ ತ್ರಿಸದಸ್ಯ ಪೀಠ ನಿನ್ನೆ ಬಿಬಿಎಂಪಿ ಚುನಾವಣೆ ಸಂಬಂಧ ಮೇಲ್ಮನವಿ ಸಲ್ಲಿಸಿರುವ ರಾಜ್ಯ ಸರ್ಕಾರದ ಪರ ವಕೀಲರು ಹಾಗೂ ಪ್ರತಿವಾದಿಗಳಾದ ಬಿಬಿಎಂಪಿ ಮಾಜಿ ಸದಸ್ಯರಾದ ಎಂ.ಶಿವರಾಜ್ ಮತ್ತು ಅಬ್ದುಲ್ ವಾಜಿದ್ ಪರ ವಕೀಲರನ್ನು ವೀಡಿಯೋ ಕಾನರೆನ್ಸ್ ಮೂಲಕ ವಿಚಾರಣೆ ನಡೆಸಿತ್ತು.
 
ಈ ಸಂದರ್ಭದಲ್ಲಿ ಪ್ರತಿವಾದಿ ವಕೀಲರ ವಾದ ಆಲಿಸಿದ ನ್ಯಾಯಪೀಠ ನಾಲ್ಕು ವಾರಗಳ ನಂತರ ಬಿಬಿಎಂಪಿ ಚುನಾವಣೆ ಮುಂದೂಡಿಕೆ ವಿಚಾರಣೆಗೆ ದಿನಾಂಕ ನಿಗದಿ ಪಡಿಸಿ ಅಂತಿಮ ತೀರ್ಪು ನೀಡುವುದಾಗಿ ಭರವಸೆ .
ಹೀಗಾಗಿ ಕಳೆದ ಒಂದು ವರ್ಷದಿಂದ ಚುನಾವಣೆ ನಡೆಯದ ಬಿಬಿಎಂಪಿಗೆ ಜನವರಿ ಇಲ್ಲವೇ ಫೆಬ್ರವರಿಯಲ್ಲಿ ಚುನಾವಣೆ ದಿನಾಂಕ ಘೋಷಣೆಯಾಗುವ ಆಶಾಭಾವನೆ ವ್ಯಕ್ತವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾಡಹಬ್ಬ ದಸರಾ ಉದ್ಘಾಟನೆ ಹೇಗೆ ನಡೆಯಿತ್ತು..?