Publish Date: Sat, 12 Jul 2025 (16:19 IST)
Updated Date: Sat, 12 Jul 2025 (16:22 IST)
ಹುಬ್ಬಳ್ಳಿ: ಕರ್ನಾಟಕ ಸಿಎಂ ಬದಲಾಯಿಸಬೇಕೋ ಅಥವಾ ಬೇಡವೋ ಎನ್ನುವುದನ್ನು ಹೈಕಮಾಂಡ್‌ಗೆ ಬಿಟ್ಟ ನಿರ್ಧಾರ. ಆ ಕುರಿತು ಅವರೇ ಮಾತನಾಡುತ್ತಿಲ್ಲ ಎಂದಾಗ, ನಾವು-ನೀವು ಚರ್ಚೆ ನಡೆಸುವುದರಲ್ಲಿ ಅರ್ಥವಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಕುರಿತು ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲಾ ಅವರು ಯಾರೊಂದಿಗೂ ಚರ್ಚಿಸಿಲ್ಲ. ಸಿಎಂ ಬದಲಾಯಿಸುವ ಅಧಿಕಾರ ಇರುವ ಪಕ್ಷದ ನಾಯಕರು ಸುಮ್ಮನಿದ್ದಾರೆ. ಹೀಗಾಗಿ ಆ ಕುರಿತು ಚರ್ಚಿಸುವುದು ಅಪ್ರಸ್ತುತ ಎಂದರು.
'ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸಭೆ ನಡೆಸಿದ್ದು, ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಶಾಸಕರಿಗೆ ಸೂಚಿಸಿದ್ದಾರೆ. ಕೆಪಿಸಿಸಿ ಅಧ್ಯಕರ ಬದಲಾವಣೆ ಕುರಿತು ಸಹ ಯಾವ ಚರ್ಚೆಗಳು ನಡೆದಿಲ್ಲ. ಈ ಎಲ್ಲದರ ಬಗ್ಗೆ ಹೈಕಮಾಂಡ್ ತೀರ್ಮಾನವನ್ನು ತೆಗೆದುಕೊಳ್ಳಲಿದೆ ಎಂದರು.