ಬೆಂಗಳೂರು: ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ತೆಲಂಗಾಣ ರಾಜ್ಯದ ಕಾಂಗ್ರೆಸ್ ಸರ್ಕಾರ 55,143 ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ದಾಖಲೆ ಬರೆದಿದ್ದರೆ ಇಲ್ಲಿ, ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 2.76 ಲಕ್ಷ ಖಾಲಿ ಹುದ್ದೆಗಳು ಭರ್ತಿ ಆಗದೇ ನೆನೆಗುದಿಗೆ ಬಿದ್ದಿದ್ದರೂ ನೇಮಕಾತಿ ಮಾಡಿಕೊಳ್ಳದೆ ಮೀನಮೇಷ ಎಣಿಸುತ್ತಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಒಂದೇ ವರ್ಷದಲ್ಲಿ 33.143 ಸರ್ಕಾರಿ ನೌಕರರನ್ನು ನೇಮಕ ಮಾಡುವ ಮೂಲಕ ತಮ್ಮ ಸರ್ಕಾರ ದೇಶದಲ್ಲಿಯೇ ಅಭೂರತಪೂರ್ವ ಸಾಧನೆ ಮಾಡಿದೆ ಎಂದು ತೆಲಂಗಾಣ ಸಿಎಂ ಎ ರೇವಂತ್ ರೆಡ್ಡಿ ಹೇಳಿದ್ದರು.
ಈ ವಿಚಾರ ಮುಂದಿಟ್ಟು ಆರ್ ಅಶೋಕ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ತೆಲಂಗಾಣ ರಾಜ್ಯದ ಕಾಂಗ್ರೆಸ್ ಸರ್ಕಾರ 55,143 ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ದಾಖಲೆ ಬರೆದಿದ್ದರೆ ಇಲ್ಲಿ, ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 2.76 ಲಕ್ಷ ಖಾಲಿ ಹುದ್ದೆಗಳು ಭರ್ತಿ ಆಗದೇ ನೆನೆಗುದಿಗೆ ಬಿದ್ದಿದ್ದರೂ ನೇಮಕಾತಿ ಮಾಡಿಕೊಳ್ಳದೆ ಮೀನಮೇಷ ಎಣಿಸುತ್ತಿದೆ.
ಸ್ವಾಮಿ ಸಿದ್ದರಾಮಯ್ಯನವರೇ, ಯುವನಿಧಿ ಹೆಸರಿನಲ್ಲಿ ಯುವಕರಿಗೆ ಮಂಕು ಬೂದಿ ಎರಚಿದ್ದು ಸಾಕು. ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ನಾಡಿನ ಯುವಕ ಯುವತಿಯರಿಗೆ ಉದ್ಯೋಗದ ಗ್ಯಾರೆಂಟಿ ಕೊಡಿ.