Select Your Language

Notifications

webdunia
webdunia
webdunia
Wednesday, 9 April 2025
webdunia

ಸಿದ್ದರಾಮಯ್ಯ ಸಿಎಂ ಆದಾಗಲೆಲ್ಲ ಅಧಿಕಾರಿಗಳಿಗೆ ಕಿರುಕುಳ ಭಾಗ್ಯ, ಆತ್ಯಹತ್ಯೆ ಗ್ಯಾರಂಟಿ: ಆರ್‌.ಅಶೋಕ್

Chief Minister Siddaramaiah

Sampriya

ಬೆಂಗಳೂರು , ಸೋಮವಾರ, 5 ಆಗಸ್ಟ್ 2024 (16:22 IST)
ಬೆಂಗಳೂರು:  ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದಾಗಲೆಲ್ಲ ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ಭಾಗ್ಯ, ಆತ್ಮಹತ್ಯೆ ಗ್ಯಾರೆಂಟಿ ಭಾಗ್ಯ ನೀಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಈಚೆಗೆ ಪಿಎಸ್‌ಐ ಪರಶುರಾಮ್ ಅಸಹಜವಾಗಿ ಸಾವನ್ನಪ್ಪಿದ್ದ ಬೆನ್ನಲ್ಲೇ ಇಂದು ಸಿಸಿಬಿ ಇನ್ಸ್‌ಸ್ಪೆಕ್ಟರ್  ತಿಮ್ಮೇಗೌಡ ಅವರು ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಬೆಳಕಿಗೆ ಬಂದಿದೆ.

ಇದೀಗ ಈ ಸಂಬಂಧ  ಆರ್‌ ಅಶೋಕ್ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಅದರಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗೆಲ್ಲ ಸಾವನ್ನಪ್ಪಿದ ಅಧಿಕಾರಿಗಳ ಮಾಹಿತಿಯನ್ನು ಹಂಚಿಕೊಂಡು ಇದು ಕಿರುಕುಳ ಭಾಗ್ಯ, ಆತ್ಮಹತ್ಯೆ ಭಾಗ್ಯ ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್‌ನಲ್ಲಿ ಹೀಗಿದೆ: ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆದಾಗಲೆಲ್ಲ ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ಭಾಗ್ಯ, ಆತ್ಮಹತ್ಯೆ ಗ್ಯಾರೆಂಟಿ.

2013-18

ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ

ಕೋಲಾರ ಡಿಸಿ ಡಿ.ಕೆ.ರವಿ ಆತ್ಮಹತ್ಯೆ

ಕಲ್ಬುರ್ಗಿಯ ದಕ್ಷ ಪೊಲೀಸ್‌ ಅಧಿಕಾರಿ ಮಲ್ಲಿಕಾರ್ಜುನ ಬಂಡೆ ಹತ್ಯೆ


ಅನ್ನಭಾಗ್ಯ ಹಗರಣದ ಸಾಕ್ಷ್ಯ ಸಂಗ್ರಹಿಸಿದ್ದ ಐ.ಎ.ಎಸ್‌ ಅಧಿಕಾರಿ ಅನುರಾಗ್‌ ತಿವಾರಿ ಉತ್ತರ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಸಾವು.

ಹೂವಿನ ಹಡಗಲಿಯ ಡಿ.ವೈ.ಎಸ್.ಪಿ ಯಾಗಿದ್ದ ಅನುಪಮಾ ಶೆಣೈಗೆ ಕಿರುಕುಳ, ನೌಕರಿಗೆ ರಾಜೀನಾಮೆ

ಮೈಸೂರಿನ ಜಿಲ್ಲಾಧಿಕಾರಿ ಶಿಖಾ ಅವರಿಗೆ ಸಿಎಂ ಆಪ್ತರಿಂದ ಕಿರುಕುಳ

ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ
ಮಹಾನಿರ್ದೇಶಕಿಯಾಗಿದ್ದ ರಶ್ಮಿಯವರ ಮೇಲೆ ಹಾಡುಹಗಲೇ ಮಾರಣಾಂತಿಕ ಹಲ್ಲೆ

2023-

ಶಿವಮೊಗ್ಗದಲ್ಲಿ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ

ಗ್ರಾಮೀಣಾಭಿವೃದ್ಧಿ ಇಲಾಖೆಯ ಲಂಚಕೋರತನಕ್ಕೆ ಬೇಸತ್ತು ದಾವಣಗೆರೆಯ ಗುತ್ತಿಗೆದಾರ ಪಿ.ಸಿ.ಗೌಡರ್ ಆತ್ಮಹತ್ಯೆ

ವರ್ಗಾವಣೆ ದಂಧೆಯ ಒತ್ತಡ, ಕಿರುಕುಳ ತಾಳಲಾರದೆ ಯಾದಗಿರಿ ಪಿಎಸ್ ಐ ಪರಶುರಾಮ್ ಹೃದಯಾಘಾತದಿಂದ ಸಾವು.

ಸಿಎಂ ಸಿದ್ದರಾಮಯ್ಯ ಅವರೇ ತಮ್ಮ ಭ್ರಷ್ಟಾಚಾರದ ದಾಹ ತೀರಲು ಇನ್ನೆಷ್ಟು ಪ್ರಾಮಾಣಿಕ ಅಧಿಕಾರಿಗಳ ಬಲಿ ಆಗಬೇಕು?

Share this Story:

Follow Webdunia kannada

ಮುಂದಿನ ಸುದ್ದಿ

ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ, ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್