Publish Date: Sun, 03 Mar 2019 (11:15 IST)
Updated Date: Sun, 03 Mar 2019 (11:18 IST)
ಕೊಪ್ಪಳ : ಉಗ್ರರನ್ನು ಹತ್ಯೆ ಮಾಡಿದ್ದಕ್ಕೆ ಶವಗಳ ಸಾಕ್ಷಿ ಕೇಳಿ ಇದೀಗ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ನಗರದಲ್ಲಿ ಮಾತನಾಡಿದ ಶಾಸಕರು, ಭಾರತೀಯ ವಾಯು ಪಡೆಯ ಯುದ್ಧ ವಿಮಾನಗಳು ಪಾಕಿಸ್ತಾನದಲ್ಲಿದ್ದ ಉಗ್ರರ ನೆಲೆಯ ಮೇಲೆ 12 ನಿಮಿಷ ದಾಳಿ ಮಾಡಿವೆ. ಈ ದಾಳಿಯಲ್ಲಿ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಹೇಳುತ್ತಿದೆ. ಹಾಗಾದರೆ ಶವಗಳು ಎಲ್ಲಿವೆ? ಉಗ್ರ ಮೃತ ದೇಹವನ್ನು ಯಾರೂ ತೋರಿಸಿಲ್ಲ’ ಎಂದು ಹೇಳಿದ್ದಾರೆ.
‘ಸೈನಿಕರ ಸಾವಿನ ಹೆಸರಲ್ಲಿ ರಾಜಕೀಯ ಮಾಡಬಾರದು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಏರ್ ಸ್ಟ್ರೈಕ್ ನಿಂದಾಗಿ ರಾಜ್ಯದಲ್ಲಿ 22 ಸೀಟ್ ಗೆಲ್ಲುತ್ತೇವೆ ಎಂದು ಹೇಳಿದ್ದ ದುರಂತ. ಇದಕ್ಕಿಂತ ದೊಡ್ಡ ದುರಂತ ಮತ್ತೊಂದಿಲ್ಲ. ಸೈನಿಕ ಕುಟುಂಬ ಸಂಕಷ್ಟದಲ್ಲಿವೆ. ಆದರೆ ನಮ್ಮ ರಕ್ಷಿಸುವ ಯೋಧರ ಮೇಲೆ ರಾಜಕೀಯ ಮಾಡುವುದು ನಾಚಿಕೆಗೇಡಿತನ. ಕೋಮುಗಲಭೆ, ಗಲಾಟೆ ಮಾಡಸೋದು ಬಿಜೆಪಿಯ ಕೆಲಸ’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.