Publish Date: Tue, 28 Feb 2023 (15:03 IST)
Updated Date: Tue, 28 Feb 2023 (15:29 IST)
ಶಿವಮೊಗ್ಗ : ಕಾಂಗ್ರೆಸ್ನಲ್ಲಿ ರಾಷ್ಟ್ರೀಯ ನಾಯಕರು ಎಲ್ಲಿದ್ದಾರೆ? ರಾಷ್ಟ್ರೀಯ ನಾಯಕರಿಲ್ಲದೆ ಕಾಂಗ್ರೆಸ್ ಪಕ್ಷವು ಸೊರಗುತ್ತಿದೆ. ನಮ್ಮಲ್ಲಿ ರಾಜ್ಯ ನಾಯಕರು, ರಾಷ್ಟ್ರೀಯ ನಾಯಕರು ಕೂಡಾ ಇದ್ದಾರೆ.
ರಾಜ್ಯಕ್ಕೆ ಪಕ್ಷ ಸಂಘಟನೆಗೆ ನಮ್ಮ ರಾಷ್ಟ್ರೀಯ ನಾಯಕರು ಬರುತ್ತಲೇ ಇರುತ್ತಾರೆ. ರಾಹುಲ್ ಗಾಂಧಿ, ಸೋನಿಯಾ ಹಾಗೂ ಪ್ರಿಯಾಂಕಾ ಗಾಂಧಿ ಪ್ರಚಾರ ಮಾಡಿದ ಕಡೆಯಲ್ಲೆಲ್ಲಾ ಕಾಂಗ್ರೆಸ್ ಸೋತಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ಪಕ್ಷವನ್ನು ಟೀಕಿಸಿದರು.
ಪದೇ ಪದೇ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಬರುವ ಬಗ್ಗೆ ಕಾಂಗ್ರೆಸ್ ಟೀಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಗತಿ ಇಲ್ಲದೇ ಇರುವವರು ಕಾಂಗ್ರೆಸ್ ನಲ್ಲಿ ಪ್ರಚಾರಕ್ಕೆ ಬರುತ್ತಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮಾತ್ರ ಎಲ್ಲೆಡೆ ಹೋಗುತ್ತಿದ್ದಾರೆ.
ಅವರಿಬ್ಬರು ಸಮಾವೇಶಗಳನ್ನು ಮಾಡಿಕೊಂಡು ಬಾಯಿಗೆ ಬಂದಂತೆ ಮಾತನಾಡಿಕೊಂಡು ಓಡಾಡುತ್ತಿದ್ದಾರೆ. ಅವರಲ್ಲಿ ನಾಯಕರೇ ಇಲ್ಲ. ಹಾಗಾಗಿ ಅವರು ಯಾರೂ ರಾಜ್ಯಕ್ಕೆ ಬರುವುದಿಲ್ಲ. ಇದ್ದವರು ಬಂದರೆ ಚುನಾವಣೆಯಲ್ಲಿ ಸೋಲುತ್ತಾರೆ ಎಂದು ವ್ಯಂಗ್ಯವಾಡಿದರು.