ಬೆಂಗಳೂರು: ಕರ್ನಾಟಕದಲ್ಲಿ ಕುರ್ಚಿ ಫೈಟ್ ತಾರಕಕ್ಕೇರಿದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಕೈಯಲ್ಲಿ ಏನೂ ಮಾಡಲಾಗುತ್ತಿಲ್ಲ ಎಂದು ಅಸಹಾಯಕರಾಗಿದ್ದಾರೆ. ಇದೀಗ ಕುರ್ಚಿ ಫೈಟ್ ಗೆ ಹೈಕಮಾಂಡ್ ಎಂಟ್ರಿ ಕೊಡುತ್ತಿದೆ. ಹಾಗಿದ್ದರೆ ರಾಹುಲ್ ಗಾಂಧಿ ಈಗೆಲ್ಲಿದ್ದಾರೆ ಇಲ್ಲಿದೆ ವಿವರ.
ಎರಡು ದಿನಗಳಿಂದ ಬೆಂಗಳೂರಿನಲ್ಲಿಯೇ ಬೀಡುಬಿಟ್ಟಿದ್ದ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಬಣದ ನಡುವೆ ನಡೆಯುತ್ತಿರುವ ಕುರ್ಚಿ ಫೈಟ್ ಪರಿಹರಿಸಲು ಯತ್ನಿಸಿದ್ದಾರೆ. ಆದರೆ ಎರಡೂ ಬಣದ ನಾಯಕರು ಪಟ್ಟು ಹಿಡಿದು ಕೂತಿದ್ದಾರೆ.
ಹೀಗಾಗಿ ಮಲ್ಲಿಕಾರ್ಜುನ ಖರ್ಗೆಯಿಂದ ಇದನ್ನು ಪರಿಹರಿಸಲು ಸಾಧ್ಯವಾಗುತ್ತಿಲ್ಲ. ಇನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ರಾಹುಲ್ ಗಾಂಧಿಯತ್ತ ಖರ್ಗೆ ಬೊಟ್ಟು ಮಾಡಿದ್ದರು. ಆದರೆ ರಾಹುಲ್ ಗಾಂಧಿ ಈಗ ಭಾರತದಲ್ಲೇ ಇಲ್ಲ.
ರಾಹುಲ್ ಗಾಂಧಿ ಇದೀಗ ವಿದೇಶ ಪ್ರವಾಸದಲ್ಲಿದ್ದಾರೆ. ಬಿಹಾರ ಚುನಾವಣೆ ಫಲಿತಾಂಶದ ಬಳಿಕ ರಾಹುಲ್ ಗಾಂಧಿ ವಿದೇಶಕ್ಕೆ ಹಾರಿದ್ದರು. ಹೀಗಾಗಿ ಸದ್ಯಕ್ಕೆ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಭಾರತಕ್ಕೆ ವಾಪಸ್ ಆಗುವವರೆಗೂ ಏನೂ ಮಾಡಲಾಗದ ಸ್ಥಿತಿಯಲ್ಲಿದ್ದಾರೆ.