ಬಿ.ಎಸ್.ವೈ ಬಲೆ ಹೆಣೆದದ್ದು ಎಲ್ಲಿ ಗೊತ್ತಾ?

Webdunia
ಶುಕ್ರವಾರ, 8 ಫೆಬ್ರವರಿ 2019 (17:20 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಪರೇಷನ ಕಮಲಕ್ಕೆ ಸದ್ದಿಲ್ಲದೇ ಬಲೆ ಹೆಣೆಯುತ್ತಿದ್ದಾರೆ ಎಂಬ ಸುದ್ದಿಗಳು ಹರಿದಾಡಲಾರಂಭಿಸಿವೆ. ಇದಕ್ಕೆ ಅವರು ವಾಸ್ತವ್ಯ ಮಾಡಿರುವುದು ಚರ್ಚೆಗೆ ಇಂಬು ಕೊಟ್ಟಿದೆ. 

ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ ಬಿ.ಎಸ್.ಯಡಿಯೂರಪ್ಪ ವಾಸ್ತವ್ಯ ಮಾಡಿದ್ದರ ಸುತ್ತ ಅನುಮಾನದ ಹುತ್ತ ಆವರಿಸಿದೆ.

ದೇವದುರ್ಗ ಪಟ್ಟಣದಲ್ಲಿನ ಪ್ರವಾಸ ಮಂದಿರದಲ್ಲಿ ಕಳೆದ ಗುರುವಾರ ರಾತ್ರಿ ವಾಸ್ತವ್ಯ ಮಾಡುವ ಮೂಲಕ ಮೈತ್ರಿ ಸರ್ಕಾರ ಪತನಕ್ಕೆ ರಣತಂತ್ರ ರೂಪಿಸಿದ್ದರು ಎನ್ನುವ ಚರ್ಚೆಗಳು ನಡೆಯುತ್ತಿವೆ. ಅಲ್ಲದೇ ಜಿಲ್ಲೆಯ ಅತೃಪ್ತ ಕಾಂಗ್ರೆಸ್ ಶಾಸಕರನ್ನ ಸೆಳೆಯುವ ಪ್ರಯತ್ನ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಮಸ್ಕಿ ಶಾಸಕ ಪ್ರತಾಪ್ ಗೌಡ ಸ್ವಪಕ್ಷದ ಮೇಲೆ ಮುನಿಸಿಕೊಂಡಿದ್ದರು. ಹಾಗಾಗಿ ಅವರಿಗೆ ರಾತ್ರೋರಾತ್ರಿ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ರಾಯಚೂರು ಗ್ರಾಮೀಣ ಶಾಸಕ ಬಸವನಗೌಡ ಅವರು ಅತೃಪ್ತಗೊಂಡಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು. ಹೀಗಾಗಿ ಅವರಿಗೂ ಸಹ ಮಹರ್ಷಿ ವಾಲ್ಮೀಕಿ ನಿಗಮ ಮಂಡಳಿ ಸ್ಥಾನವನ್ನು ಕಲ್ಪಿಸಲಾಗಿದೆ. 

ಆಡಿಯೋ ರಿಲೀಸ್:
ಶಾಸಕ ನಾಗನಗೌಡರ ಪುತ್ರ ಶರಣಗೌಡ ಅವರಿಗೆ ಬಿಎಸ್​ವೈ ಆಮಿಷ‌ ಒಡ್ಡಿದ್ದಾರೆ ಎನ್ನಲಾದ ಆಡಿಯೋವನ್ನು ಸಿಎಂ ಕುಮಾರಸ್ವಾಮಿ ರಿಲೀಸ್​ ಮಾಡಿದ್ದು, ರಾಜಕೀಯ ವಲವಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಹೀಗಾಗಿ ದೇವದುರ್ಗದ ಪ್ರವಾಸಿ ಮಂದಿರದಲ್ಲಿ ಅಪರೇಷನ್ ಕಮಲ ನಡೆಸಿರುವುದು ನಿಜವೇ ಎನ್ನುವ ಅನುಮಾನ ಹುಟ್ಟುಹಾಕಿದೆ. 

ಅಲ್ಲದೇ ಈ ಆರೋಪಕ್ಕೆ ಪ್ರತಿಕ್ರಿಯಿಸಿರುವ ಬಿ.ಎಸ್.ಯಡಿಯೂರಪ್ಪ, ಇದು ನಿಜವಾಗಿದ್ದರೆ ರಾಜಕೀಯವಾಗಿ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದ್ದಾರೆ. ಹೀಗಾಗಿ ದೇವದುರ್ಗದ ಪ್ರವಾಸಿ ಮಂದಿರದಲ್ಲಿ ತಂಗಿದ್ದ ಬಿ.ಎಸ್.ಯಡಿಯೂರಪ್ಪನವರ ರಣತಂತ್ರವೇನು? ರಾಜಕೀಯ ಗುಟ್ಟೇನು? ಎನ್ನುವುದು ಸೇರಿದಂತೆ ಹಲವು ಸಂಶಯಗಳು ಮೂಡಿವೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments