ಹೆಲ್ಮೆಟ್ ಎಲ್ಲಿ ಡಿಕೆ ಸಾಹೇಬ್ರೇ? ಸಾರ್ವಜನಿಕರ ಆಕ್ರೋಶಕ್ಕೊಳಗಾದ ಡಿಕೆ ಶಿವಕುಮಾರ್

Sampriya
ಶುಕ್ರವಾರ, 2 ಆಗಸ್ಟ್ 2024 (18:59 IST)
Photo Courtesy X
ಬಿಡದಿ: ಮೈತ್ರಿ ಪಕ್ಷಗಳಿಗೆ ಟಕ್ಕರ್ ಕೊಡಲು ಇಂದು ಕಾಂಗ್ರೆಸ್ ಜನಾಂದೋಲ ಕಾರ್ಯಕ್ರಮ ನಡೆಸುತ್ತಿದ್ದು, ಇದರ ಪೂರ್ವಭಾವಿಯಾಗಿ ಕಾಂಗ್ರೆಸ್ ನಾಯಕರು ಇಂದು ಬಿಡದಿಯಲ್ಲಿ ಜನಾಂದೋಲನ ಸಭೆ ನಡೆಸಿದರು. ಅದಕ್ಕೂ ಮುನ್ನಾ ಕಾಂಗ್ರೆಸ್ ನಾಯಕರು ಬೃಹತ್ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡರು. ಈ ಸಂದರ್ಭ ಡಿಸಿಎಂ ಡಿಕೆ ಶಿವಕುಮಾರ್ ಅವರು ಹೆಲ್ಮೆಟ್ ಧರಿಸದೆ ಬೈಕ್ ಸವಾರಿ ಮಾಡಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋಗಳು ವೈರಲ್ ಆಗಿದ್ದು, ಇದನ್ನು ನೋಡಿದ ನೆಟ್ಟಿಗರು ಹೆಲ್ಮೆಟ್ ಎಲ್ಲಿ ಡಿಕೆ ಸಾಹೇಬ್ರೇ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

ರಾಜ್ಯದಲ್ಲಿ ಆರು ವರ್ಷ ಮೇಲ್ಪಟ್ಟ ಎಲ್ಲ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯವಿದೆ. ಆದರೆ ಇದಕ್ಕೆಲ್ಲ ಕ್ಯಾರೇ ಎನ್ನದೇ ಡಿಸಿಎಂ ಅವರು ರ್ಯಾಲಿಯಲ್ಲಿ ಪಾಲ್ಗೊಂಡಿದ್ದಾರೆ. ಅದಲ್ಲದೆ ಈ ವೇಳೆ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಹೆಲ್ಮೆಟ್ ಹಾಕದೆ ಬೈಕ್ ಸವಾರಿ ಮಾಡಿರುವುದನ್ನು ಸಾರ್ವಜನಿಕರು ಪ್ರಶ್ನಿಸಿ ಆಕ್ರೋಶ ಹೊರಹಾಕಿದ್ದಾರೆ.

ಜನಸಾಮಾನ್ಯರಿಗೆ ಒಂದು ನಿಯಮ, ರಾಜಕೀಯ ನಾಯಕರಿಗೆ ಒಂದು ನಿಯಮವೇ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಶಿವಕುಮಾರ್‌ ಊಟ, ತಿಂಡಿ ಮಾಡಿಕೊಂಡೇ ಎರಡೂವರೆ ವರ್ಷ ಕಳೆದ್ರು: ಶ್ರೀರಾಮುಲು ವ್ಯಂಗ್ಯ

ಬಾಲಕಿಗೆ ಲೈಂಗಿಕ ಕಿರುಕುಳ ಕೇಸ್: ಬಿಎಸ್ ಯಡಿಯೂರಪ್ಪ ಕೇಸ್ ಗೆ ಮಹತ್ವದ ಆದೇಶ ಕೊಟ್ಟ ಸುಪ್ರೀಂಕೋರ್ಟ್

ಬ್ರೇಕ್ ಫಾಸ್ಟ್ ಮುಗಿಸಿ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments