Select Your Language

Notifications

webdunia
webdunia
webdunia
webdunia

ಮಹಾ ಮಸ್ತಕಾಭಿಷೇಕ, ಸಂತ ಸಮ್ಮೇಳನದ ವೈಭವ ಎಲ್ಲಿದೆ ಗೊತ್ತಾ?

webdunia
ಶುಕ್ರವಾರ, 8 ಫೆಬ್ರವರಿ 2019 (13:40 IST)
ಸುಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೇ ಇಂದು ನಡೆಯುವ ಸಂತ ಸಮ್ಮೇಳನದಲ್ಲಿ ಮಾಜಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಹಾ ಮಸ್ತಕಾಭಿಷೇಕ ನಡೆಯುತ್ತಿದೆ. ಅದರ ಅಂಗವಾಗಿ ಇಂದಿನಿಂದ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಇಂದು ಸಂತ ಸಮ್ಮೇಳನ ನಡೆಯಲಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು  ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಜನಕಲ್ಯಾಣ  ಕಾರ್ಯಕ್ರಮಗಳಿಗೆ ನಾಳೆ ಚಾಲನೆ ನೀಡಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕೋಪಯೋಗಿ ಇಲಾಖೆ ಸಚಿವ ಹೆಚ್. ಡಿ. ರೇವಣ್ಣ ಭಾಗವಹಿಸಲಿದ್ದಾರೆ. ನಾಳೆ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ  ಸಚಿವೆ ಜಯಮಾಲಾ ಚಾಲನೆ ನೀಡಲಿದ್ದಾರೆ.  ಫೆಬ್ರುವರಿ 15, 16 ಹಾಗೂ 17 ರಂದು ಬಾಹುಬಲಿ ಸ್ವಾಮಿಗೆ ಮಹಾ ಮಸ್ತಕಾಭಿಷೇಕ ನಡೆಯಲಿದೆ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಸಮ್ಮಿಶ್ರ ಸರ್ಕಾರದ ಬಜೆಟ್ ವಿರೋಧಿಸಿ ಬಿಜೆಪಿಯಿಂದ ಸಭಾತ್ಯಾಗ