Daily Horoscope

Select Your Language

Notifications

webdunia
webdunia
webdunia
webdunia

ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಬಯೋಮೆಟ್ರಿಕ್ ಎಲ್ಲಿ ಮಾಡಿಸಬೇಕು, ಯಾವೆಲ್ಲಾ ದಾಖಲೆ ಬೇಕು

Gruhalakshmi scheme
ಬೆಂಗಳೂರು: ಕರ್ನಾಟಕ ಸರ್ಕಾರ ಗೃಹಲಕ್ಷ್ಮಿ ಯೋಜನೆಯಲ್ಲಿ ಕೊಂಚ ಬದಲಾವಣೆ ತರಲು ಮುಂದಾಗಿದೆ. ಇದೀಗ ಬಯೋಮೆಟ್ರಿಕ್ ಮಾಡಿಸಬೇಕಾದರೆ ಎಲ್ಲಿ ಮಾಡಿಸಬೇಕು, ಯಾವೆಲ್ಲಾ ದಾಖಲೆ ಬೇಕು ಇಲ್ಲಿದೆ ವಿವರ.

ಗೃಹಲಕ್ಷ್ಮಿ ಯೋಜನೆಯಲ್ಲಿ ಅನರ್ಹರನ್ನು ಕಿತ್ತು ಹಾಕಲು ರಾಜ್ಯ ಸರ್ಕಾರ ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆ ಹಣ ಪಡೆಯುತ್ತಿರುವವರೂ ಕೂಡಲೇ ಬಯೋಮೆಟ್ರಿಕ್ ಮಾಡಿಸಿಕೊಳ್ಳಬೇಕು. ಇಲ್ಲದೇ ಹೋದರೆ ಮುಂದಿನ ತಿಂಗಳಿನಿಂದ ಹಣ ಬರಲ್ಲ.

ಬಯೋಮೆಟ್ರಿಕ್ ಮಾಡಿಸಿಕೊಳ್ಳುವುದು ಎಲ್ಲಿ?
ನಿಮ್ಮ ಹತ್ತಿರದ ಬೆಂಗಳೂರು ಒನ್, ಗ್ರಾಮ ಒನ್, ಸೇವಾ ಕೇಂದ್ರ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಮಾಡಿಸಿಕೊಳ್ಳಬಹುದು.
ಯಾವೆಲ್ಲಾ ದಾಖಲೆ ಬೇಕು?
ಆಧಾರ್ ಕಾರ್ಡ್, ರೇಷನ್ ಕಾರ್ಡ್ ಕಡ್ಡಾಯವಾಗಿ ಬೇಕಾಗುತ್ತದೆ. ಇದರ ಜೊತೆಗೆ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆಯೇ ಎಂದು ಖಚಿತಪಡಿಸಿಕೊಳ್ಳಬೇಕು.

Share this Story:

Follow Webdunia kannada

ಮುಂದಿನ ಸುದ್ದಿ

ಮಾನವೀಯತೆನೇ ಇಲ್ವಾ... ಮೊಮ್ಮಗಳನ್ನು ಮಹಡಿಯಿಂದ ತಳ್ಳಿ ತಣ್ಣಗೆ ಮಂಚದ ಮೇಲೆ ಮಲಗಿದ ತಾತ Video