Publish Date: Mon, 27 Apr 2026 (14:29 IST)
Updated Date: Mon, 27 Apr 2026 (14:35 IST)
ಬೆಂಗಳೂರು: ತಾಯಿ ಜತೆ ಮಾತನಾಡುತ್ತಿರುವಾಗಲೇ ಬ್ರೈನ್ ಸ್ಟೋಕ್ ಒಳಗಾದ ಟೆಕ್ಕಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.
ಮೃತ ಟೆಕ್ಕಿಯನ್ನು ಹಾಸನ ಜಿಲ್ಲೆಯ ಶ್ವೇತಾ (25) ಎಂದು ಗುರುತಿಸಲಾಗಿದೆ. ಏ.25ರ ಶನಿವಾರ ಕೆಲಸ ಮುಗಿಸಿ ಮನೆಗೆ ಬಂದ ಶ್ವೇತಾ ತಾಯಿಯ ಜೊತೆ ನಗುನಗುತ್ತಾ ಮಾತನಾಡುತ್ತಿರುವಾಗಲೇ ಏಕಾಏಕಿ ಕುಸಿದು ಬಿದ್ದಿದ್ದಾರೆ.
ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಶ್ವೇತಾ ಕೋಮಾಗೆ ಜಾರಿದ್ದಾಳೆ. ದುಃಖದ ಮಧ್ಯೆಯೇ ಬ್ರೈನ್ ನಿಷ್ಕ್ರಿಯಗೊಂಡಿದ್ದರಿಂದ ಪೋಷಕರು ಅಂಗಾಂಗ ದಾನ ಮಾಡಲು ನಿರ್ಧರಿಸಿದ್ದರು.
ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಿಸದೇ ಶ್ವೇತಾ ಮೃತಪಟ್ಟಿದ್ದಾರೆ. ಹೀಗಾಗಿ ಅಂಗಾಂಗ ದಾನ ನಡೆಸಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಒಬ್ಬಳೇ ಪುತ್ರಿಯನ್ನು ಕಳೆದುಕೊಂಡು ಹೆತ್ತವರು ಕಂಗಾಲಾಗಿದ್ದಾರೆ. ಸದ್ಯ ಶ್ವೇತಾ ಮೃತದೇಹವನ್ನು ಹಾಸನಕ್ಕೆ ಶಿಫ್ಟ್ ಮಾಡಲಾಗಿದೆ