Webdunia - Bharat's app for daily news and videos

Install App

ರಾಹುಲ್ ಗಾಂಧಿಯನ್ನು ಟೀಕಿಸುತ್ತಿರುವವರು ಮಾನಸಿಕ ಅಸ್ವಸ್ಥರು!

Webdunia
ಭಾನುವಾರ, 3 ಮೇ 2015 (15:25 IST)
ರಾಹುಲ್ ಗಾಂಧಿಯನ್ನು ಟೀಕಿಸುತ್ತಿರುವವರ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್ ನಾಯಕ, ಆರೋಗ್ಯ ಸಚಿವ ಯು.ಟಿ. ಖಾದರ್ ತಮ್ಮ ನಾಯಕನನ್ನು ಟೀಕಿಸುವವರು ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ. ಅಂತವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತೇವೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. 

"ಎಷ್ಟೇ ಬುದ್ಧಿವಂತನಾಗಿದ್ರೂ ಮಾರ್ಗದರ್ಶನದ ಅವಶ್ಯಕತೆ ಇರುತ್ತದೆ. ಮೊಬೈಲ್ ನೋಡಿ ಸಂದೇಶ ಬರೆದಿರುವುದರಲ್ಲಿ ತಪ್ಪೇನು? ಇಷ್ಟು ಚಿಕ್ಕ ವಿಷಯಕ್ಕೆ ರಾಹುಲ್ ಅವರನ್ನು ಟೀಕಿಸುವವರು ಮಾನಸಿಕ ಅಸ್ವಸ್ಥರು. ಅವರಿಗೆ ಉಚಿತವಾದ  ಚಿಕಿತ್ಸೆ ಕೊಡಿಸಲು ಬೆಂಗಳೂರಿನಲ್ಲಿ ನಿಮಾನ್ಸ್ ಆಸ್ಪತ್ರೆ ಇದೆ. ಅಂತವರನ್ನು ಸರಕಾರದ ವತಿಯಿಂದ ನಿಮಾನ್ಸ್‌ಗೆ ಸೇರಿ ಚಿಕಿತ್ಸೆ ಕೊಡಿಸುತ್ತೇವೆ", ಎಂದು ಖಾದರ್ ಕಿಡಿಕಾರಿದ್ದಾರೆ.
 
ರಾಜಧಾನಿಯಲ್ಲಿರುವ ನೇಪಾಳ ರಾಯಭಾರ ಕಚೇರಿಗೆ ಶುಕ್ರವಾರ ತೆರಳಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಸಂದರ್ಶಕರ ಪುಸ್ತಕದಲ್ಲಿ ತಮ್ಮ ಸಂತಾಪ ಸಂದೇಶವನ್ನು ಬರೆದಿದ್ದರು. ಆಗ ಅವರು ತಮ್ಮ ಮೊಬೈಲ್‌ ಫೋನ್‌ನಲ್ಲಿದ್ದ ಪಠ್ಯವನ್ನು ನಕಲು ಮಾಡಿ ಬರೆಯುತ್ತಿರುವುದು ಟಿವಿ ಕ್ಯಾಮೆರಾಗಳು ಸೆರೆಹಿಡಿದಿದ್ದು, ಆ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ಫೋಟೋ ಹಾಗೂ ವಿಡಿಯೋಗಳಿಗೆ ವ್ಯಾಪಕ ಕುಚೇಷ್ಠೆಯ ಪ್ರತಿಕ್ರಿಯೆಗಳು ಬರುತ್ತಿವೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments