Select Your Language

Notifications

webdunia
webdunia
webdunia
webdunia

ಗೆಲುವಿನ ಖಾತೆ ತೆರೆಯುವವರು ಯಾರು?

ಗೆಲುವಿನ ಖಾತೆ ತೆರೆಯುವವರು ಯಾರು?
bangalore , ಗುರುವಾರ, 31 ಮಾರ್ಚ್ 2022 (20:50 IST)
15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಇಂದು ನಡೆಯಲಿರುವ ಏಳನೇ ಪಂದ್ಯದಲ್ಲಿ ಕೆಎಲ್ ರಾಹುಲ್ ನಾಯಕತ್ವದ ಲಖನೌ ಸೂಪರ್ ಜೇಂಟ್ಸ್ ಮತ್ತು ರವೀಂದ್ರ ಜಡೇಜಾ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್​ ತಂಡಗಳು ಸೆಣೆಸಾಟ ನಡೆಸಲಿವೆ. ಉಭಯ ತಂಡಗಳು ಕೂಡ ಆಡಿದ ಮೊದಲ ಪಂದ್ಯದಲ್ಲಿ ಸೋಲು ಕಂಡಿದ್ದು ಗೆಲುವಿನ ಖಾತೆ ತೆರೆಯುವುದು ಉಭಯ ತಂಡಗಳಿಗೆ ಅನಿವಾರ್ಯವಾಗಿದೆ. ಐಪಿಎಲ್ 2022ರ ಮೊದಲ ಪಂದ್ಯದಲ್ಲಿ ಸಿಎಸ್​​ಕೆ ವಿರುದ್ಧ ಕೆಕೆಆರ್ 6 ವಿಕೆಟ್​ಗಳಿಂದ ಗೆದ್ದರೆ ಗುಜರಾತ್ ಟೈಟಾನ್ಸ್ ವಿರುದ್ಧ ಲಖನೌ ಸೋಲುಂಡಿತ್ತು. ಸೋಲಿನೊಂದಿಗೆ ಟೂರ್ನಿ ಆರಂಭಿಸಿರುವ ಉಭಯ ತಂಡಗಳು ಇದೀಗ ಚೊಚ್ಚಲ ಗೆಲುವನ್ನು ಎದುರು ನೋಡುತ್ತಿವೆ. ಮುಂಬೈನ ಬ್ರಬೋರ್ನ್​​​ ಸ್ಟೇಡಿಯಂ ಈ ಹೈವೋಲ್ಟೇಜ್ ಕದನಕ್ಕೆ ಸಾಕ್ಷಿಯಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಾಕ್​ ಪ್ರಧಾನಿಯಾಗಿ ಶಹಬಾಜ್ ಷರೀಫ್?