ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಸಾರಿಗೆ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಜರುಗಿತು.
ಸಭೆಯಲ್ಲಿ ಸಾರಿಗೆ ಇಲಾಖೆಯ ಕುಂದುಕೊರತೆಯ ಬಗ್ಗೆ ಚರ್ಚೆ ನಡೆಸಲಾಗಿದೆ. ಸಭೆಯಲ್ಲಿ ಸಾರಿಗೆ ಸಚಿವ ಬಿ.ಶ್ರೀರಾಮುಲು, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕ.ರಾ.ರ.ಸಾ.ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಉಪಸ್ಥಿತರಿದ್ದರು.
ಈ ಮೊದಲು ಮುಖ್ಯಮಂತ್ರಿ ಇಂದು ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಅಧಿಕಾರಿಗಳಿಗೆ ವಿಧಾನಸೌಧದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿದರು. ಅಲ್ಲದೇ, ಮತದಾನ ಸಂವಿಧಾನ ನಮಗೆ ನೀಡಿರುವ ಅತ್ಯಮೂಲ್ಯ ಹಕ್ಕು.
ಎಲ್ಲರಿಗೂ ರಾಷ್ಟ್ರೀಯ ಮತದಾರರ ದಿನದ ಶುಭಾಶಯಗಳು ಎಂದು ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡುವ ಮೂಲಕ ರಾಷ್ಟ್ರೀಯ ಮತದಾರರ ದಿನದ ಶುಭಕೋರಿದ್ದಾರೆ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!