Publish Date: Tue, 26 Dec 2017 (15:51 IST)
Updated Date: Tue, 26 Dec 2017 (15:53 IST)
ಸಂವಿಧಾನದ ಪ್ರಮಾಣ ವಚನ ಸ್ವೀಕರಿಸಿ ಕೇಂದ್ರ ಸಚಿವರಾಗಿರುವ ಅನಂತ್ ಕುಮಾರ್ ಹೆಗಡೆ ಇದೀಗ ಸಂವಿಧಾನ ಬದಲಾಯಿಸುತ್ತೇವೆ ಎಂದು ಹೇಳಿದ್ದಾರೆ. ಸಂವಿಧಾನ ಬದಲಾಯಿಸಲು ಹೆಗಡೆ ಯಾರು? ಎಂದು ಉನ್ನತ ಶಿಕ್ಷಣ ಖಾತೆ ಸಚಿವ ಬಸವರಾಜ್ ರಾಯರೆಡ್ಡಿ ಗುಡುಗಿದ್ದಾರೆ.
ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಕೇಂದ್ರ ಸಚಿವರಾಗಿ ಮುಂದುವರಿಯಲು ನಾಲಾಯಕ್. ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ತಿರುಗೇಟು ನೀಡಿದ್ದಾರೆ.
ದೇಶದಲ್ಲಿ ಎಲ್ಲಿಯವರೆಗೆ ಜಾತಿ ವ್ಯವಸ್ಥೆ ಇರುತ್ತದೆಯೋ ಅಲ್ಲಿಯವರೆಗೆ ಮೀಸಲಾತಿ ಅಗತ್ಯವಾಗಿದೆ. ಜನಸಂಖ್ಯೆ ಹೆಚ್ಚಳವಾಗುತ್ತಿದ್ದಂತೆ ಸಮಯಕ್ಕೆ ಸರಿಯಾಗಿ ಮೀಸಲಾತಿ ಹೆಚ್ಚಾಗುವುದು ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ.
ಒಂದು ವೇಳೆ, ಹೆಗಡೆ ಕೀಳುಜಾತಿಯಲ್ಲಿ ಜನಿಸಿದ್ದಲ್ಲಿ ಇದರ ನೋವು ಸಂಕಷ್ಟ ಅರಿವಾಗುತ್ತಿತ್ತು. ದೇಶದ ಸಂವಿಧಾನ ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಚಿವ ಬಯವರಾಜ್ ರಾಯರೆಡ್ಡಿ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.