ರಾಜ್ಯದ ಮುಖ್ಯಮಂತ್ರಿ ನಾರಿಮನೋ ಅಥವಾ ಸಿದ್ದರಾಮಯ್ಯನೋ ಎನ್ನುವುದು ತಿಳಿಯುತ್ತಿಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್,ಈಶ್ವರಪ್ಪ ಕಿಡಿಕಾರಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ನಿಜವಾದ ಮುಖ್ಯಮಂತ್ರಿ ಯಾರು ಎನ್ನುವುದು ತಿಳಿಯುತ್ತಿಲ್ಲ. ರಾಜ್ಯ ಸರಕಾರಕ್ಕೂ ತಿಳಿಸಿದ ಕಾವೇರಿಯಿಂದ ತಮಿಳುನಾಡಿಗೆ ನೀರು ಬಿಡುವ ಕುರಿತು ಕರ್ನಾಟಕ ಪರ ವಕೀಲ ನಾರಿಮನ್ ಸುಪ್ರೀಂ ಕೋರ್ಟ್‌ಗೆ ಅಫಿಡೆವಿಟ್ ಸಲ್ಲಿಸಿದ್ದಾರೆ. ಹೀಗಾಗಿ ಅವರನ್ನು ಕೂಡಲೇ ಕೈ ಬಿಡಬೇಕು ಎಂದು ಆಗ್ರಹಿಸಿದರು.
ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಹಿನ್ನೆಡೆಯಾಗಲು ರಾಜ್ಯ ಸರಕಾರವೇ ನೇರ ಹೊಣೆ. ನೀರಾವರಿ ಸಚಿವ ಎಂ.ಬಿ.ಪಾಟೀಲ್ ಅವರಿಂದ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು.
ಸಂಗೊಳ್ಳಿ ರಾಯಣ್ಣ ಬ್ರಿಗೇಡ್.....
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೀರ, ಅಪ್ರತಿಮ ಹೋರಾಟಗಾರ. ಅವರು ಯಾವುದೇ ಜಾತಿಗೂ ಸೀಮಿತವಾಗಿಲ್ಲ. ಈಗಾಗಲೇ ಅವರ ಹೆಸರಲ್ಲಿ ಅನೇಕ ಸಂಘಟನೆಗಳಿವೆ. ಅದರಲ್ಲಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಹ ಒಂದು. ಸಂಗೊಳ್ಳಿ ರಾಯಣ್ಣನಿಗೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಕೆ.ಎಸ್,ಈಶ್ವರಪ್ಪ ಸ್ಪಷ್ಟಪಡಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ