Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಮುಕ್ತ ಕರ್ನಾಟಕ ಎನ್ನುವವರು ಮತ್ತೊಮ್ಮೆ ಹುಟ್ಟಿ ಬರಬೇಕು: ಜಯಮಾಲಾ

ಕಾಂಗ್ರೆಸ್ ಮುಕ್ತ ಕರ್ನಾಟಕ ಎನ್ನುವವರು ಮತ್ತೊಮ್ಮೆ ಹುಟ್ಟಿ ಬರಬೇಕು: ಜಯಮಾಲಾ
ಬೆಂಗಳೂರು: , ಶನಿವಾರ, 4 ನವೆಂಬರ್ 2017 (15:04 IST)
ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ವಿಪಕ್ಷಗಳಿಂದ ಸಾಧ್ಯವಿಲ್ಲ. ಕಾಂಗ್ರೆಸ್ ಮುಕ್ತ ಕರ್ನಾಟಕ ಎನ್ನುವವರು ಮತ್ತೊಮ್ಮೆ ಹುಟ್ಟಿ ಬರಬೇಕು ಎಂದು ವಿಧಾನಪರಿಷತ್ ಸದಸ್ಯೆ ನಟಿ ಜಯಮಾಲಾ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ, ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಒಂದಾಗಿ ಚುನಾವಣೆಗೆ ಹೋದಲ್ಲಿ ಯಾವ ವಿಪಕ್ಷವು ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
 
ರಾಜ್ಯ ಕಾಂಗ್ರೆಸ್ ಮಹಿಳಾ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ಒಂದಾಗಿ ಹೋದ್ರೆ ಯಾವ ಗಂಡಸಿನಿಂದಲೂ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಸೋಲಿಸಲು ಕಾಂಗ್ರೆಸ್ಸಿಗರೆ ಬರಬೇಕು ಎಂದು ಹಿರಿಯ ನಾಯಕರ ಸಮ್ಮುಖದಲ್ಲಿ ವಾಕ್‌ಪ್ರಹಾರ್ ನಡೆಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರಕಾರ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ಬಡವರು, ಶೋಷಿತರು, ದೀನ ದಲಿತರ ಏಳಿಗೆಗೆ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಜನತೆ ಸರಕಾರ ನೀಡಿದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ದೇವಾಲಯದ ಪಕ್ಕದಲ್ಲಿಯೇ ರಷ್ಯಾ ಯುವತಿಯೊಂದಿಗೆ ಅರ್ಚಕ ಸೆಕ್ಸ್