Select Your Language

Notifications

webdunia
webdunia
webdunia
webdunia

ಕೇವಲ ಮುಸ್ಲಿಮರಿಗೆ ಮಾತ್ರ ಮೀಸಲಾತಿ ಎಂದು ಹೇಳಿದವರು ಯಾರು: ಡಿಕೆ ಶಿವಕುಮಾರ್

Muslim Reservation, DCM DK Shivkumar, Karnataka Congress Government,

Sampriya

ಬೆಂಗಳೂರು , ಶನಿವಾರ, 15 ಮಾರ್ಚ್ 2025 (19:51 IST)
Photo Courtesy X
ಬೆಂಗಳೂರು: "ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಎಂದು ಹೇಳಿದವರು ಯಾರು?. ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿಗೆ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ಅಲ್ಪಸಂಖ್ಯಾತರು ಎಂದರೆ ಕ್ರಿಶ್ಚಿಯನ್, ಜೈನ,‌ಪಾರ್ಸಿ, ಸಿಖ್ ಹೀಗೆ ಎಲ್ಲರೂ ಸೇರುತ್ತಾರೆ. ಈ ಹಿಂದೆ ಪರಿಶಿಷ್ಟ ಜಾತಿ,‌ ಪಂಗಡವರಿಗೆ ಗುತ್ತಿಗೆ ಮೀಸಲಾತಿ ನೀಡುವಂತೆ ತಿದ್ದುಪಡಿ ಮಾಡಿದ್ದೆವು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕೆಪಿಸಿಸಿ ಕಚೇರಿ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ  ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.

ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಶೇ.4 ರಷ್ಟು ಮೀಸಲಾತಿ ನೀಡಲು ಮಾಡಿರುವ ತೀರ್ಮಾನದ ಬಗ್ಗೆ
ಕೇಳಿದಾಗ, "ಕೇವಲ 2 ಕೋಟಿ ಮೊತ್ತಕ್ಕೆ ಮಾತ್ರ ಒಪ್ಪಿಗೆ ನೀಡಲಾಗಿದೆ. ಇದಕ್ಕಿಂತ ಹೆಚ್ಚಿನ ಮೊತ್ತದ‌‌ ಕಾಮಗಾರಿ ನಡೆಸಲು ಸಾಧ್ಯವಿಲ್ಲ. ನಾವು ಬೇರೆ ಯಾರ ಹಕ್ಕನ್ನು ಇಲ್ಲಿ ಕಸಿದುಕೊಳ್ಳುತ್ತಿಲ್ಲ‌ ಅವರಿಗೂ ನಾವು ಬದುಕು ಕೊಡಬೇಕಲ್ಲವೇ?" ಎಂದು ಹೇಳಿದರು.

ಬಿಜೆಪಿಯು ಗುತ್ತಿಗೆ ಮೀಸಲಾತಿಯನ್ನು ಮತ ಬ್ಯಾಂಕ್ ರಾಜಕಾರಣ ಎನ್ನುತ್ತಿದೆ ಎಂದಾಗ, "ಅವರು ನಮ್ಮನ್ನು ನೆನಪಿಸಿಕೊಳ್ಳುತ್ತಾ ಇರಬೇಕು.‌ಆಗಲೇ ನಾವು ಗಟ್ಟಿಯಾಗವುದು" ಎಂದರು.

ಕಸ ವಿಲೇವಾರಿ ವಿಚಾರದಲ್ಲಿ ಯಾವ ಶಾಸಕರು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದಾಗ, "ಎಲ್ಲಿ ಕಸ ನಿಂತಿದೆಯೋ ಅಲ್ಲಿಗೆ ಹೋಗಿ ನೀವೆ (ಮಾಧ್ಯಮದವರು) ನೋಡಿ ಗೊತ್ತಾಗುತ್ತದೆ" ಎಂದು ಹೇಳಿದರು.

ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ತಯಾರಿದೆ.

ಬಿಬಿಎಂಪಿ ಚುನಾವಣೆಗೆ ಸರ್ಕಾರ ತಯಾರಿದೆಯೇ ಎಂದು ಕೇಳಿದಾಗ, "ಖಂಡಿತವಾಗಿ ತಯಾರಿದೆ. ಎಷ್ಟು ದಿನ ನಾವು ತಪ್ಪಿಸಿಕೊಂಡು ಇರಲು ಸಾಧ್ಯ" ಎಂದರು.

"ಶನಿವಾರ (ಇಂದು) ಬೆಂಗಳೂರು ಮಹಾನಗರ ಪಾಲಿಕೆಗೆ ಸ್ಪರ್ಧೆ ಮಾಡಿದ ಅಭ್ಯರ್ಥಿಗಳ ಸಭೆಯನ್ನು ಕರೆಯಲಾಗಿದೆ. ನಂತರ ಎಲ್ಲಾ ಪಕ್ಷದವರನ್ನು ಸಭೆಗೆ ಕರೆಯಲಾಗುವುದು. ಅವರಲ್ಲಿಯೂ ಕೆಲವೊಬ್ಬರು ಅನಧಿಕೃತವಾಗಿ ಬಿಬಿಎಂಪಿ ಚುನಾವಣೆ ಕುರಿತಾಗಿ ಸಲಹೆ ನೀಡಿದ್ದಾರೆ. ಈಗ ಅಧಿಕೃತವಾಗಿ ಸಲಹೆಗಳನ್ನು ಪಡೆಯಲಾಗುವುದು" ಎಂದು ಹೇಳಿದರು.

ಕ್ಷೇತ್ರ ಪುನರ್ ವಿಂಗಡಣೆ ವಿರೋಧಿ ಸಭೆ ಮಾ.22 ರಂದು ತಮಿಳುನಾಡಿಗೆ ಪ್ರಯಾಣ

ಕ್ಷೇತ್ರ ಪುನರ್ ವಿಂಗಡಣೆ ವಿರೋಧಿ ಸಭೆಯಲ್ಲಿ ಭಾಗವಹಿಸುತ್ತಿರುವಿರಾ ಎಂದಾಗ, "ನನಗೆ ಹಾಗೂ ಮುಖ್ಯಮಂತ್ರಿಗಳಿಗೆ ತಮಿಳುನಾಡಿನ ಸಿಎಂ ಆಹ್ವಾನ ನೀಡಿದ್ದರು. ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳು ಮಾ.22 ರಂದು ತಮಿಳುನಾಡಿನಲ್ಲಿ ನಡೆಯುವ ಸಭೆಗೆ ಭಾಗವಹಿಸಿ ಎಂದು ನಿರ್ದೇಶನ ನೀಡಿದ್ದಾರೆ" ಎಂದು ಹೇಳಿದರು.

"ಮುಖ್ಯಮಂತ್ರಿಗಳಿಗೆ ಮೊಣಕಾಲಿನ ನೋವು ಇರುವ ಕಾರಣಕ್ಕೆ ವೈದ್ಯರ ಸಲಹೆಯ ಮೇರೆಗೆ ಅವರು ಬರುತ್ತಿಲ್ಲ. ಪಕ್ಷ ಹಾಗೂ ಸರ್ಕಾರದ ವತಿಯಿಂದ ನಾನು ಸಭೆಯಲ್ಲಿ ಭಾಗವಹಿಸುವೆ. ಪಕ್ಷದ ನಿಲುವನ್ನು ಹೈಕಮಾಂಡ್ ಜೊತೆ ಚರ್ಚಿಸಿ ತಿಳಿಸುವೆ" ಎಂದರು.

"ದೇಶದಲ್ಲಿ ದೊಡ್ಡ ಪ್ರಮಾಣದ ಚರ್ಚೆ ನಡೆಯುತ್ತಿದೆ. ನಾವುಗಳು ನಮ್ಮ ಹಕ್ಕುಗಳನ್ನು ಹಾಗೂ ಸಂಖ್ಯೆಗಳನ್ನು ಬಿಟ್ಟುಕೊಡಲು ತಯಾರಿಲ್ಲ. ಪಕ್ಷದ ನಿಲುವಿನ ಬಗ್ಗೆ‌ ಬರುವ 18 ರಂದು ಚರ್ಚೆ ನಡೆಸಿ ನಿಲುವನ್ನು ತಿಳಿಸುತ್ತೇವೆ" ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

Karnataka Weather: ಮುಂದಿನ 17ರ ವರೆಗೆ ಉತ್ತರ ಕರ್ನಾಟಕದಲ್ಲಿ ಗರಿಷ್ಠ ತಾಪಮಾನ