Webdunia - Bharat's app for daily news and videos

Install App

ನೀವೆಲ್ಲಾ ಇದ್ದು ಯಾಕೆ ಹೀಗಾಯ್ತು: ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್‌

Sampriya
ಶುಕ್ರವಾರ, 17 ಜನವರಿ 2025 (17:00 IST)
ಮಂಗಳೂರು: ಕೋಟೆಕರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ  ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು.

ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ಎಸ್.ಪಿ ಯತೀಶ್ , ಡಿವೈಎಸ್ ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ನೀವೆಲ್ಲಾ ಇದ್ದು ಯಾಕೆ ಹೀಗಾಯ್ತು? ಆರೋಪಿಗಳು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ ? ಎಷ್ಟು ಟೋಲ್ ಗಳನ್ನು ದಾಟಿ ಹೋಗಿದ್ದಾರೆ. ನೀವು ಟೋಲ್ ಗಳನ್ನು‌ ಏಕೆ ಟೈಟ್ ಮಾಡಲಿಲ್ಲ ಎಂದು ಗರಂ ಆಗಿ ಪ್ರಶ್ನಿಸಿದರು.

ಸಹಕಾರಿ ಬ್ಯಾಂಕ್ ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಐದಾರು ಮಂದಿ ಮಾತ್ರ ಬ್ಯಾಂಕ್ ಸಿಬ್ಬಂದಿ ಇದ್ದರು. ಆರೋಪಿಗಳು ಕನ್ನಡ ಮತ್ತು ಹಿಂದಿಯಲ್ಲಿ ಮಾತಾಡಿರುವುದು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.‌

ಎಲ್ಲಾ ಟೋಲ್ ಗಳಲ್ಲೂ ಬಿಗಿ ತಪಾಸಣೆ ನಡೆಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂಧಿ ಹಾಕಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಪ್ಪಿಸಿ ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments