ಬಿಜೆಪಿಗರ ಮೇಲೆ ಏಕೆ ದಾಳಿ ಆಗಲ್ಲ, ಅವರೆಲ್ಲ ಏನು ಬಡವರಾ?

Webdunia
ಭಾನುವಾರ, 8 ಆಗಸ್ಟ್ 2021 (08:00 IST)
ಬೆಂಗಳೂರು (ಆ.08):  ಮಾಜಿ ಸಚಿವ ಜಮೀರ್ ಅಹಮದ್ ಖಾನ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ದಾಳಿ ರಾಜಕೀಯ ಪ್ರೇರಿತ. ಐಟಿ- ಇ.ಡಿ. ದಾಳಿಗಳು ಬಿಜೆಪಿ ನಾಯಕರ ಮೇಲೆ ಏಕೆ ಆಗಲ್ಲ? ಬಿಜೆಪಿ ನಾಯಕರೆಲ್ಲಾ ಬಿಪಿಎಲ್ ಕಾರ್ಡುದಾರರೇ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯವಾಗಿ ಐಟಿ ದಾಳಿಯಾದ ಬಳಿಕ ಅವರ ಶಿಫಾರಸು ಪ್ರಕಾರ ಇ.ಡಿ.ಯವರು ದಾಳಿ ಮಾಡುತ್ತಾರೆ. ಅದು ಆದಾಯ ಮೀರಿ ಆಸ್ತಿ ಗಳಿಸಿದ್ದರೆ, ಅಕ್ರಮವಾಗಿ ಹಣ ವರ್ಗಾವಣೆ ಅಥವಾ ದುರುಪಯೋಗವಾಗಿದ್ದರೆ ಮಾತ್ರ. ಆದರೆ, ಜಮೀರ್ ಅಹಮದ್ ಅವರ ಮನೆಯ ಮೇಲೆ ಇ.ಡಿಯವರು ಏಕಾಏಕಿ ದಾಳಿ ನಡೆಸಿದ್ದಾರೆ. ಇದು ರಾಜಕೀಯ ಪ್ರೇರಿತ ಹಾಗೂ ಇದರ ಹಿಂದೆ ದುರುದ್ದೇಶ ಅಡಗಿದೆ ಎಂದರು.
ಜಮೀರ್ ಅಹಮದ್ ಅವರು ಮನೆ ಕಟ್ಟಿಸಿದ್ದಾರೆ ಅಷ್ಟೇ. ಹಣ ದುರುಪಯೋಗ ಅಥವಾ ಅಕ್ರಮ ವರ್ಗಾವಣೆ ಆಗಿಲ್ಲ. ಈ ದಾಳಿಗಳು ಬಿಜೆಪಿಯವರ ಮೇಲೆ ಏಕೆ ನಡೆಯುವುದಿಲ್ಲ. ಅವರೆಲ್ಲ ಬಡವರೇ, ಬಿಪಿಎಲ್ ಕಾರ್ಡುದಾರರೇ ? ಕಾಂಗ್ರೆಸ್ಸಿಗರನ್ನೇ ಗುರಿಯಾಗಿಸಿ ಇಂತಹ ದಾಳಿಗಳನ್ನು ಸಂಘಟಿಸುವುದು ಏಕೆ ಎಂದು ಪ್ರಶ್ನಿಸಿದರು.
ಜಮೀರ್ ಅಹಮದ್ ಖಾನ್ ಅವರು ನನ್ನ ಆಪ್ತರು. ಅದೇ ರೀತಿ ಹಲವಾರು ಮಂದಿ ನನಗೆ ಆಪ್ತರಿದ್ದಾರೆ. ಕೇವಲ ಕಾಂಗ್ರೆಸ್ ಮಾತ್ರವಲ್ಲ, ಬಿಜೆಪಿಯಲ್ಲೂ ಇದ್ದಾರೆ. ಆದರೆ ಸ್ನೇಹವೇ ಬೇರೆ, ರಾಜಕೀಯವೇ ಬೇರೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಂಡನ ಚಿತೆ ಆರುವ ಮೊದಲೇ ಅಜಿತ್ ಪವಾರ್ ಪತ್ನಿ ಉಪ ಮುಖ್ಯಮಮಂತ್ರಿಯಾಗಿದ್ದೇಕೆ: ಮಾಸ್ಟರ್ ಪ್ಲ್ಯಾನ್ ಯಾರದ್ದು

Union Budget 2026: ಆದಾಯ ತೆರಿಗೆ ವಂಚಿಸುವವರಿಗೆ ಶಾಕ್ ಕೊಟ್ಟ ನಿರ್ಮಲಾ ಸೀತಾರಾಮನ್

Union Budget 2026: ಬಜೆಟ್ ಘೋಷಣೆ ಬೆನ್ನಲ್ಲೇ ಷೇರು ಮಾರುಕಟ್ಟೆ ಗಡ ಗಡ

Union budget 2026: ಈ ಬಾರಿ ಬಜೆಟ್ ನಲ್ಲಿ ಘೋಷಣೆಯಾದ ಹೊಸ ಯೋಜನೆಗಳ ಲಿಸ್ಟ್ ಇಲ್ಲಿದೆ

Union Budget 2026: ನಿರ್ಮಲಾ ಬಜೆಟ್ ನಲ್ಲಿ ಯಾವುದಕ್ಕೆ ಏರಿಕೆ, ಯಾವುದಕ್ಕೆ ಇಳಿಕೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments