ಗೂಂಡಾಗಿರಿ ಪ್ರಕರಣ: ಬಿಜೆಪಿ ಶಾಸಕರೆಂದರೇ ಸಿಎಂಗೆ ಭಯಾನಾ? ಎಂದ ಪೂಜಾರಿ

Webdunia
ಸೋಮವಾರ, 9 ಜನವರಿ 2017 (16:18 IST)
ಬಿಜೆಪಿ ಶಾಸಕ ರಾಜು ಕಾಗೆ ವಿರುದ್ಧದ ಗೂಂಡಾಗಿರಿ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿರುವ ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ್ ಪೂಜಾರಿ, ಇಷ್ಟೆಲ್ಲಾ ಗಲಾಟೆ ನಡೆದ್ರೂ, ಶಾಸಕನ ಬಂಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರಮ ಕೈಗೊಂಡಿಲ್ಲ. ಬಿಜೆಪಿ ಶಾಸಕರೆಂದರೇ ಸಿಎಂಗೆ ಭಯಾನಾ? ಎಂದು ಪ್ರಶ್ನಿಸಿದರು.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಉಗಾರ ಕ್ಷೇತ್ರದ ಬಿಜೆಪಿ ಶಾಸಕನ ಪುತ್ರಿ ಹಾಗೂ ಗ್ಯಾಂಗ್ ಗೂಂಡಾವರ್ತನೆ ತೋರಿದ್ದಾರೆ. ಆದರೂ, ಅವರ ವಿರುದ್ಧ ಕ್ರಮ ತೆಗೆದುಕೊಂಡಿಲ್ಲ. ಸಿಎಂ ಸಿದ್ದರಾಮಯ್ಯ ಏನು ಗಾಡ ನಿದ್ರೆಯಲ್ಲಿದ್ದಾರಾ?. ಗೃಹ ಸಚಿವ ಡಾ.ಜಿ.ಪರಮೇಶ್ವರ್‌ಗೆ ಪ್ರಕರಣ ನಿಭಾಯಿಸಲು ಸಾಧ್ಯವಾಗುತ್ತಿಲ್ವಾ? ಎಂದು ಕಿಡಿಕಾರಿದರು.
 
ಗೃಹ ಇಲಾಖೆಯನ್ನು ನಿಭಾಯಿಸುವಲ್ಲಿ ಡಾ.ಜಿ.ಪರಮೇಶ್ವರ್‌ ವಿಫಲವಾಗಿದ್ದಾರೆ. ಪರವೇಶ್ವರ್‌ಗೆ ತನ್ನ ಕರ್ತವ್ಯವನ್ನು ಸರಿಯಾಗಿ ಮಾಡಲು ಸಾಧ್ಯವಾಗ್ತಿಲ್ಲ. ಈ ಕೂಡಲೇ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತೆರಳಿ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಆಗ್ರಹಿಸಿದ್ದಾರೆ.
 
ಫೇಸ್‌ಬುಕ್‌ನಲ್ಲಿ ಕೆಟ್ಟದಾಗಿ ಕಮೆಂಟ್ ಮಾಡಿದ್ದಕ್ಕೆ ಕಾಂಗ್ರೆಸ್ ನಾಯಕನ ಮನೆಗೆ ನುಗ್ಗಿ ಬಿಜೆಪಿ ಶಾಸಕ ರಾಜು ಕಾಗೆ ಪುತ್ರಿ ಹಾಗೂ ಟೀಂ ಡೆಡ್ಲಿ ಅಟ್ಯಾಕ್ ಮಾಡಿದ ಘೋರ ಕೃತ್ಯ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಉಗಾರ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿತ್ತು. 
 
ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಅವರ ರೌಡಿ ಗ್ಯಾಂಗ್, ಫೇಸ್‌ಬುಕ್‌ನಲ್ಲಿ ಕಮೆಂಟ್ ಮಾಡಿದ್ದ ಕಾಂಗ್ರೆಸ್ ನಾಯಕ ವಿವೇಕ ಶೆಟ್ಟಿ ಮನೆಗೆ ನುಗ್ಗಿ ಮಹಿಳೆ ಮಕ್ಕಳು ಎನ್ನುವುದನ್ನು ನೋಡದೆ ಅಟ್ಟಹಾಸ ಮೆರೆದಿದ್ದು, ಈ ಭೀಭತ್ಸ ಕೃತ್ಯದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಸ್ತೆ ಮಾಡಿದ್ರೆ ಬಡವರು ಉದ್ದಾರವಾಗಲ್ಲ ಎಂದ ಪರಮೇಶ್ವರ್: ಉದ್ದಾರವಾಯ್ತು ಕನ್ನಡ ನಾಡು ಎಂದ ಅಶೋಕ್

ಇನ್ ಸ್ಟಾಗ್ರಾಂ ಫಾಲೋವರ್ ಸಂಖ್ಯೆ ಹೆಚ್ಚು ಮಾಡೋದು ಹೇಗೆ

ಮುಸ್ಲಿಂ ಮಹಿಳೆಯ ಹಿಜಾಬ್ ಎಳೆದ ಬಿಹಾರ ಸಿಎಂ ನಿತೀಶ್ ಕುಮಾರ್: ವಿಡಿಯೋ ವೈರಲ್

ಅಧಿಕಾರ ಹಂಚಿಕೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿಂದ ಬಂತು ಸ್ಪಷ್ಟ ಸಂದೇಶ

ಸದನಕ್ಕೆ ಟಿ ಶರ್ಟ್ ಧರಿಸಿ ಬರಬೇಡಿ ಎಂದ ಸ್ಪೀಕರ್ ಖಾದರ್: ರಾಹುಲ್ ಗಾಂಧಿ ಹೀಗೇ ಬರ್ತಾರಲ್ವಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments