Webdunia - Bharat's app for daily news and videos

Install App

ವೃದ್ಧನೊಬ್ಬ ಪತ್ನಿಯನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

Webdunia
ಬುಧವಾರ, 22 ಮೇ 2019 (09:33 IST)
ಬೆಂಗಳೂರು :  ವೃದ್ಧನೋರ್ವ ತನ್ನ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ.




ನಾರಾಯಣಪ್ಪ(70) ಕೊಲೆ ಮಾಡಿ  ಆತ್ಮಹತ್ಯೆ ಮಾಡಿಕೊಂಡ ವೃದ್ಧ, ಲಕ್ಷ್ಮಮ್ಮ(65) ಕೊಲೆಯಾದ ಪತ್ನಿ. ಈ ದಂಪತಿಗಳ  ನಡುವೆ ಆಸ್ತಿ ವಿಚಾರಕ್ಕೆ ಜಗಳ ನಡೆದ ಹಿನ್ನಲೆಯಲ್ಲಿ ಲಕ್ಷ್ಮಮ್ಮ, ತನ್ನ ಪತಿಯನ್ನು ಬಿಟ್ಟು ಮಗ ಹಾಗೂ ಮಗಳ ಜೊತೆ ವಾಸಿಸುತ್ತಿದ್ದಳು. ಆದರೆ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ 32 ಗುಂಟೆ ಜಮೀನನ್ನು ಮಾರಾಟ ಮಾಡಿದ್ದರು. ಈ ವಿಚಾರಕ್ಕೆ ಮಗ ಹಾಗೂ ಮಗಳು ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.


ಇದರಿಂದ ಕೋಪಗೊಂಡ ನಾರಾಯಣಪ್ಪ ದೂರು ಹಿಂಪಡಿಯುವಂತೆ ಪತ್ನಿಗೆ ಒತ್ತಡ ಹೇರುತ್ತಿದ್ದ. ಇದಕ್ಕೆ ಪತ್ನಿ ಒಪ್ಪದಿದ್ದಾಗ ಆಕೆ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಪರಿಣಾಮ ಆಕೆ ಸಾವನಪ್ಪಿದ್ದಾಳೆ. ನಂತರ ತಾನೂ ವಿಷ ಸೇವಿಸಿದ್ದು, ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಾಯಿಸಿದರೂ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾನೆ. ಈ ಘಟನೆಗೆ  ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸತೀಶ್ ಜಾರಕಿಹೊಳಿಗೆ ಬೆಳ್ಳಂ ಬೆಳಿಗ್ಗೇ ಇಡಿ ಶಾಕ್

Karnataka Weather: ಕರ್ನಾಟಕದಲ್ಲಿ ಇಂದು ಇಲ್ಲಿ ವಿಪರೀತ ಬಿಸಿಲು, ಆದರೆ ಈ ಜಿಲ್ಲೆಗೆ ಮಳೆ ಸಾಧ್ಯತೆ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

ಮುಂದಿನ ಸುದ್ದಿ
Show comments