Publish Date: Thu, 01 Aug 2019 (19:18 IST)
Updated Date: Thu, 01 Aug 2019 (19:19 IST)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ದಿಢೀರ್ ಸಭೆ ಕರೆದಿದ್ದಾರೆ.
ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯನ್ನ ಮುಖ್ಯಮಂತ್ರಿ ಕರೆದಿದ್ದಾರೆ.
ಆ. 2 ರಂದು ವಿಧಾನಸೌಧದಲ್ಲಿ ಬೆಳಗ್ಗೆ 11ಕ್ಕೆ ಸಭೆ ನಡೆಯಲಿದ್ದು, ಬರ ಪರಿಹಾರ ಕಾರ್ಯಗಳ ನಿರ್ವಹಣೆ, ಇನ್ನಿತರ ಸಮಸ್ಯೆಗಳ ಕುರಿತು ಸಿಎಂ ಅಧಿಕಾರಿಗಳಿಗೆ ಸೂಚನೆ ಕೊಡಲಿದ್ದಾರೆ.
ಗುಳೆ ಹೋಗೋದನ್ನು ತಪ್ಪಿಸುವುದು ಅಲ್ಲದೇ ಕುಡಿಯುವ ನೀರಿನ ಸಮರ್ಪಕ ಪೂರೈಕೆ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಿ ಸಮಸ್ಯೆಗಳಿದ್ದ ಸ್ಥಳಗಳಲ್ಲಿ ತುರ್ತು ಪರಿಹಾರಕ್ಕೆ ಸಿಎಂ ಸಲಹೆ, ನಿರ್ದೇಶನ ನೀಡಲಿದ್ದಾರೆ.