Select Your Language

Notifications

webdunia
webdunia
webdunia
webdunia

ಡಿಸಿಎಂ ದೆಹಲಿಗೆ ಹೋಗಿದ್ದು ಏಕೆ? ಕೈ ಪಾಳೆಯದಲ್ಲಿ ಕುತೂಹಲ!

ಡಿಸಿಎಂ ದೆಹಲಿಗೆ
ರಾಜ್ಯದ ಸಮ್ಮಿಶ್ರ ಸರಕಾರದಲ್ಲಿ ಸಂಪುಟ ವಿಸ್ತರಣೆ ಸುದ್ದಿ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ದೆಹಲಿಗೆ ಪಯಣ ಬೆಳೆಸಿದ್ದಾರೆ. ಇದು ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಸಂಪುಟ ವಿಸ್ತರಣೆ ಸುದ್ದಿ ಹರಡುತ್ತಿರುವಂತೆಯೇ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ದೆಹಲಿಗೆ ದೌಡಾಯಿಸಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ವಿಸ್ತರಣೆ ವೇಳೆಯಲ್ಲಿ ಯಾರನ್ನು ಪರಿಗಣಿಸಬೇಕು ಎಂಬುದು ವರಿಷ್ಠರಿಗೆ ಬಿಟ್ಟ ವಿಷಯ. ಅದರಂತೆ ಕಾಂಗ್ರೆಸ್- ಜೆಡಿಎಸ್ ಸಮನ್ವಯ ಸಮಿತಿಗೆ ಎರಡೂ ಪಕ್ಷಗಳ ಅಧ್ಯಕ್ಷರನ್ನು ಸದಸ್ಯರನ್ನಾಗಿ ನೇಮಕ ಮಾಡುವುದನ್ನು ಆಯಾ ಪಕ್ಷಗಳ ಹಿರಿಯರು ನೋಡಿಕೊಳ್ಳುತ್ತಾರೆ. ಸಮನ್ವಯ ಸಮಿತಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಅಟಲ್ ಜೀ ನೆನೆದು ಭಾವುಕರಾದ ಬಿ ಎಸ್ ವೈ