ಸಿಎಂ ಯಡಿಯೂರಪ್ಪ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಸಿಡಿದೆದ್ದಿದ್ದೇಕೆ?

Webdunia
ಶುಕ್ರವಾರ, 20 ಸೆಪ್ಟಂಬರ್ 2019 (14:53 IST)
ಬೆಂಗಳೂರು : ಕುಮಾರಸ್ವಾಮಿ ಅವರ ಸರ್ಕಾರ ಅವಧಿಯಲ್ಲಿ ಜಾರಿಯಾಗಿರುವ ಕೆಲ ಯೋಜನೆಗಳನ್ನು ಯಡಿಯೂರಪ್ಪ ಅವರ ಸರ್ಕಾರ ತಡೆಹಿಡಿಯಲು ಮುಂದಾದ ಹಿನ್ನಲೆಯಲ್ಲಿ ಇದೀಗ ಮಾಜಿ ಸಿಏಂ ಕುಮಾರಸ್ವಾಮಿ, ಸಿಎಂ ಯಡಿಯೂರಪ್ಪ ಅವರ ವಿರುದ್ಧ ಕಿಡಿಕಾರಿದ್ದಾರೆ.




ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ನಿಮಗೆ ದ್ವೇಷ ಇದ್ದದ್ದು ನನ್ನ ಮೇಲಲ್ಲವೇ ಯಡಿಯೂರಪ್ಪನವರೇ? ಆದರೆ ಬಡವರ ಮೇಲೇಕೆ ನಿಮ್ಮ ಕೋಪ? ಸೇಡಿನ ರಾಜಕೀಯ ಮಾಡುವುದಿಲ್ಲ ಎಂದು ಸದನದಲ್ಲಿ ಹೇಳಿದ್ದ ನೀವು ಅಧಿಕಾರ ವಹಿಸಿಕೊಂಡ ನಂತರ ನನ್ನ ಸರ್ಕಾರದ ಕಾರ್ಯಕ್ರಮಗಳ ವಿಷಯದಲ್ಲಿ ಮಾಡಿದ್ದೆಲ್ಲವೂ ಸೇಡಿನ ಕ್ರಮ. ‘ಬಡವರ ಬಂಧು’ ಯೋಜನೆಯನ್ನು ನಿರ್ಲಕ್ಷಿಸಿ ನೀವು ಬಡವರ ವಿರೋಧಿಯಾಗಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಆರ್ಥಿಕವಾಗಿ ಅಶಕ್ತರಾದವರು, ಸಣ್ಣ ವ್ಯಾಪಾರಿಗಳನ್ನು ಲೇವಾದೇವಿದಾರರ ವಿಷವರ್ತುಲದಿಂದ ಪಾರು ಮಾಡುವ ಸದುದ್ದೇಶದಿಂದ ಬಡವರ ಬಂಧು ಕಾರ್ಯಕ್ರಮವನ್ನು ಜಾರಿಗೆ ತರಲಾಗಿತ್ತು. ಅಶಕ್ತರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ನೆರವಾಗುತ್ತಿದ್ದ ಈ ಯೋಜನೆಯನ್ನು ಕೊಲ್ಲುತ್ತಿರುವ ನೀವು ಬಡವರ ಸ್ವಾಭಿಮಾನವನ್ನು ಕೆಣಕಿದ್ದೀರಿ ಯಡಿಯೂರಪ್ಪನವರೇ ಎಂದು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ಮುಂದಿನ ಸುದ್ದಿ
Show comments