Publish Date: Sun, 28 Jun 2026 (17:13 IST)
Updated Date: Sun, 28 Jun 2026 (17:15 IST)
ಮೈಸೂರು: ದೇಶದ ಸಂವಿಧಾನ ಉಳಿವಿಗೆ ಎಸ್‌ಐಆರ್ ಕುರಿತು ಪ್ರತಿಯೊಬ್ಬರೂ ಜಾಗೃತಿ ಆಗಬೇಕಿದೆ. ಇಲ್ಲವಾದಲ್ಲಿ ದೇಶ ಮತ್ತೇ ಸರ್ವಾಧಿಕಾರಕ್ಕೆ ಹೋಗುತ್ತದೆ. ಮತದಾರರು, ಪ್ರಜಾಪ್ರಭುತ್ವದ ಮಾರಣಹೋಮ ಆಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದರು.
ಇಲ್ಲಿನ ಜೆ.ಕೆ.ಮೈದಾನದಲ್ಲಿ ಭಾನುವಾರ ಕಾಂಗ್ರೆಸ್ ಆಯೋಜಿಸಿದ್ದ ಮೈಸೂರು ವಿಭಾಗೀಯ ಮಟ್ಟದ ಎಸ್ ಐಆರ್ ಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು.
ಪ್ರತಿಯೊಂದು ಚುನಾವಣೆಯು ಪ್ರಜಾಪ್ರಭುತ್ವದ ಬುನಾದಿ. ಮತದಾನ ಎಲ್ಲ ವಯಸ್ಕರ ಹಕ್ಕು. ಇದನ್ನು ಮೊಟಕು ಮಾಡುವ ಅಧಿಕಾರ ಯಾರಿಗೂ ಇಲ್ಲ. ಚುನಾವಣಾ ಆಯೋಗವು ಸಾಂವಿಧಾನಿಕ ರೀತಿಯಲ್ಲಿ ನಡೆಯುವುದು ಅವರ ಜವಾಬ್ದಾರಿ ಎಂದು ಹೇಳಿದರು.
ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವುದು ಅವರ ಹಕ್ಕು ಕಸಿದಂತೆ. ಅರ್ಹರನ್ನು ಪಟ್ಟಿಗೆ ಸೇರಿಸುವುದು ಆಯೋಗದ ಜವಾಬ್ದಾರಿ. ಆದರೆ 2014ರಿಂದ ಈಚೆಗೆ ಮತದಾನದ ದ್ರೋಹ ನಡೆದಿದೆ ಎಂದು ಹೇಳಿದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ