Webdunia - Bharat's app for daily news and videos

Install App

ಈತ ಮಹಿಳಾ ಶೌಚಾಲಯ ಪ್ರವೇಶಿಸಿದ್ದಾದ್ರು ಯಾಕೆ?

Webdunia
ಭಾನುವಾರ, 29 ಮೇ 2022 (15:13 IST)
ಬೆಳಗಾವಿ : ನಗರದ ಕನ್ನಡ ಸಾಹಿತ್ಯ ಭವನ ಆವರಣದಲ್ಲಿರುವ ಮಹಿಳಾ ಶೌಚಾಲಯಕ್ಕೆ ವ್ಯಕ್ತಿಯೊಬ್ಬ ಒಳಗಡೆ ಪ್ರವೇಶಿಸಿ ಬಾಗಿಲು ಲಾಕ್ ಮಾಡಿಕೊಂಡು ಹುಚ್ಚಾಟ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
 
ನಗರದ ಚೆನ್ನಮ್ಮ ವೃತ್ತದಲ್ಲಿರುವ ಸಾಹಿತ್ಯ ಭವನದ ಆವರಣದಲ್ಲಿ ಮಹಿಳಾ ಶೌಚಾಲಯಕ್ಕೆ ನುಗ್ಗಿದ ವ್ಯಕ್ತಿ ಕಿತ್ತೂರು ತಾಲೂಕಿನ ಖೋದಾನಪುರ ಮೂಲದವನು ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಹುಚ್ಚಾಟ ಪ್ರದರ್ಶನ ಮಾಡುತ್ತಿದ್ದವನನ್ನು ವಶಕ್ಕೆ ಪಡೆದುಕೊಂಡರು.

ಇಂದು ಬೆಳಗ್ಗೆ 7 ಗಂಟೆಗೆ ವ್ಯಕ್ತಿಯೊಬ್ಬ ಸಾಹಿತ್ಯ ಭವನದಲ್ಲಿರುವ ಶೌಚಾಲಯಕ್ಕೆ ಹೋಗಿ ಲಾಕ್ ಮಾಡಿಕೊಂಡಿದ್ದಾನೆ. ಈ ವೇಳೆ ಹುಚ್ಚಾಟ ಪ್ರದರ್ಶನ ಮಾಡಿದ್ದು, ಸ್ಥಳೀಯರು ಭಯಗೊಂಡಿದ್ದಾರೆ. ಪರಿಣಾಮ ಭವನದ ಸಿಬ್ಬಂದಿಗಳು ಮತ್ತು ಸ್ಥಳದಲ್ಲಿದ್ದ ಪೊಲೀಸರು ಬಾಗಿಲು ತೆಗೆಸಲು ಹರಸಾಹಸಪಟ್ಟರು.

ದೃಶ್ಯ ನೋಡಿದ ಎಲ್ಲರು ಒಂದು ಕ್ಷಣ ಗಾಬರಿಗೊಂಡಿದ್ದಾರೆ. ಪೊಲೀಸರು ಸಾಹನ ಮಾಡಿ ಅವನ ಕೈಯಲ್ಲಿದ್ದ ಗಾಜಿನ ಪುಡಿಯನ್ನು ಕೆಳಗಡೆ ಚೆಲ್ಲಿಸಿದ್ದಾರೆ. ಬಳಿಕ ವ್ಯಕ್ತಿಯನ್ನ ಮನವೊಲಿಸಿದ ಬೆಳಗಾವಿ ಮಾರ್ಕೆಟ್ ಪೊಲೀಸರು ಠಾಣೆಗೆ ಕರೆದುಕೊಂಡು ಹೋದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments