Publish Date: Thu, 27 Dec 2018 (08:32 IST)
Updated Date: Thu, 27 Dec 2018 (08:34 IST)
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾನ್ಯ ಸಿಎಂ ಕುಮಾರಸ್ವಾಮಿ ಗರಂ ಆಗಿದ್ದಾರೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
ಹೌದು. ಸಿದ್ದರಾಮಯ್ಯ ಡಬಲ್ ಗೇಮ್ ಆಡುತ್ತಿದ್ದಾರೆ ಎಂದು ಕಾಂಗ್ರೆಸ್ ಹೈಕಮಾಂಡ್‍ಗೆ ದೂರು ನೀಡಲು ಹಾಗೂ ರಾಜ್ಯ ಕಾಂಗ್ರೆಸ್ ನಾಯಕರ ಕಿತ್ತಾಟದ ಕುರಿತು ಚರ್ಚೆ ಮಾಡಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೆಹಲಿಗೆ ತೆರಳಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
‘ಸಿದ್ದರಾಮಯ್ಯ ಮುಂದೊಂದು ಆಟ ಆಡುತ್ತಾರೆ, ಹಿಂದೊಂದು ಆಟವಾಡುತ್ತಾರೆ. ಸಚಿವ ಸ್ಥಾನ ಹಾಗೂ ಪ್ರಮುಖ ಖಾತೆಗಳಿಗಾಗಿ ಕೇಳುವಂತೆ ಬೆಂಬಲಿಗರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಬಂಡಾಯ ಏಳುತ್ತಿರುವ ಶಾಸಕನ ಬೆಂಬಲಕ್ಕೆ ನಿಂತು ಕುಮ್ಮಕ್ಕು ನೀಡುತ್ತಿದ್ದಾರೆ. ಇದರಿಂದಾಗಿ ರಾಜ್ಯ ರಾಜಕೀಯ ನಿಯಂತ್ರಣಕ್ಕೆ ಬರುತ್ತಿಲ್ಲ. ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗರಿಗೆ ಉನ್ನತ ಸ್ಥಾನ ಹಾಗೂ ಖಾತೆ ಕೊಡಿಸಲು ಪ್ಲಾನ್ ಮಾಡಿದ್ದಾರೆ’ ಎಂದು ರಾಹುಲ್ ಗಾಂಧಿ ಅವರಿಗೆ ತಿಳಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.