Select Your Language

Notifications

webdunia
webdunia
webdunia
Friday, 11 April 2025
webdunia

ಪದ್ಮಶ್ರೀ ಬೇಡವೆಂದು ಸಿದ್ದೇಶ್ವರ ಸ್ವಾಮೀಜಿ ಮೋದಿಗೆ ಪತ್ರ ಬರೆದಿದ್ದು ಯಾಕೆ?

ವಿಜಯಪುರ
ವಿಜಯಪುರ , ಶನಿವಾರ, 27 ಜನವರಿ 2018 (05:56 IST)
ವಿಜಯಪುರ : ಗಣರಾಜ್ಯೋತ್ಸವ  ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಮಾಡಿದ್ದು, ವಿಜಯಪುರ ಜಿಲ್ಲೆಯ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರು ತಮಗೆ ದೊರೆತ ಪ್ರಶಸ್ತಿಯನ್ನು ಗೌರವಯುತವಾಗಿ ಹಿಂತಿರುಗಿಸುವ ಮನವಿ ಪತ್ರವನ್ನು ಪ್ರಧಾನಿ ಮೋದಿ ಅವರಿಗೆ ಬರೆದಿದ್ದಾರೆ.

 
ತನ್ನನ್ನು ಸಂಪರ್ಕಿಸದೇ ಆಯ್ಕೆ ಮಾಡಿದ್ದಕ್ಕೆ ಧನ್ಯವಾದಗಳನ್ನು ತಿಳಿಸುತ್ತಾ, ‘ನಾನೊಬ್ಬ ಸಾಮಾನ್ಯ ಆಧ್ಯಾತ್ಮಿಕ ಜೀವಿ, ಅದಕ್ಕಾಗಿ ನಾನು ಪ್ರಶಸ್ತಿಯನ್ನು ಹಿಂದಿರುಗಿಸುತ್ತಿದ್ದೇನೆ. ತಾವುಗಳು ಅನ್ಯತ ತಪ್ಪು ಭಾವಿಸಬೇಡಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಈ ಹಿಂದೆಯೂ ಹಲವು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ ಕೊಡುವುದಾಗಿ ಸ್ವಾಮೀಜಿ ಅವರನ್ನು ಸಂಪರ್ಕಿಸಿದ್ದವು, ಈ ವೇಳೆಯೂ ಅವರು ಪ್ರಶಸ್ತಿಗಳನ್ನು ತಿರಸ್ಕರಿಸಿದ್ದರು. ಈ ವೇಳೆ ಇಂತಹ ಪ್ರಶಸ್ತಿಗಳು ಬೇರೆ ಬೇರೆ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ ಸಾಧಕರಿಗೆ ನೀಡಿ ಗೌರವಿಸಿ ಎಂದು ಮನವಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಇಬ್ಬರು ಮುಖ್ಯಮಂತ್ರಿಗಳನ್ನು ನಿಭಾಯಿಸಲಾಗದ ಪ್ರಧಾನಿ– ಸಚಿವ