Publish Date: Mon, 12 Dec 2022 (18:55 IST)
Updated Date: Mon, 12 Dec 2022 (18:57 IST)
ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಶಿವಕುಮಾರ್ ಟೀಕಾಪ್ರಹಾರ ನಡೆಸಿದ್ದಾರೆ. ಕೆಲವರು ಪ್ರಧಾನಿ ಮೋದಿ ಹೋದರೆ, ದೇಶನೇ ಬದಲಾವಣೆ ಆಗುತ್ತೆ ಎಂದು ಹೇಳುತ್ತಾರೆ. ಆದರೆ, ದೆಹಲಿ ಮತ್ತು ಹಿಮಾಚಲದಲ್ಲಿ ಯಾಕೆ ಗೆಲ್ಲಲಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಕರ್ನಾಟಕಕ್ಕೂ ಬೇರೆ ರಾಜ್ಯಗಳಿಗೂ ಯಾವುದೇ ಸಂಬಂಧವಿಲ್ಲ. ರಾಜ್ಯದ ಜನರು ಬದಲಾವಣೆ ಬಯಸುತ್ತಿದ್ದಾರೆ. ಇವರು ಯಾಕೆ ಬಿಬಿಎಂಪಿ, ಜಿ.ಪಂ, ತಾ.ಪಂ ಚುನಾವಾಣೆ ನಡೆಸುತ್ತಿಲ್ಲ? ಇವರಿಗೆ ಸೋಲಿನ ಭಯ ಕಾಣುತ್ತಿದೆ ಎಂದು ಅವರು ಟೀಕಿಸಿದ್ದಾರೆ.