Webdunia - Bharat's app for daily news and videos

Install App

ವೈದ್ಯರ ವಿರುದ್ಧ ಎಸ್ಮಾ ಏಕೆ ಜಾರಿ ಮಾಡಿಲ್ಲ: ಸರ್ಕಾರಕ್ಕೆ ಹೈಕೋರ್ಟ್ ತರಾಟೆ

Webdunia
ಬುಧವಾರ, 29 ಅಕ್ಟೋಬರ್ 2014 (16:11 IST)
ವೈದ್ಯರ ಸಾಮೂಹಿಕ ರಾಜೀನಾಮೆಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ತರಾಟೆಗೆ ತೆಗೆದುಕೊಂಡಿದ್ದು, ಆಸ್ಪತ್ರೆಯಲ್ಲಿ ವೈದ್ಯರಿಲ್ಲದೇ ರೋಗಿಗಳು ಸಾಯುತ್ತಿದ್ದಾರೆ. ಆದರೆ ಮುಷ್ಕರ ನಿರತ ವೈದ್ಯರ ವಿರುದ್ಧ ಎಸ್ಮಾ ಏಕೆ ಜಾರಿ ಮಾಡಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದೆ. ಪ್ರತಿ ಬಾರಿಯೂ ಸರ್ಕಾರಿ ವೈದ್ಯರು ಡ್ರಾಮಾ ಮಾಡುತ್ತಿದ್ದಾರೆ.

ಸರ್ಕಾರ ಏಕೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೋರ್ಟ್ ಪ್ರಶ್ನಿಸಿದೆ. ವೈದ್ಯರ ಸಾಮೂಹಿಕ ರಾಜೀನಾಮೆಯಿಂದ ಜಿಲ್ಲಾಸ್ಪತ್ರೆಗಳಲ್ಲಿ ವೈದ್ಯರಿಲ್ಲದೇ ಬಣಗುಡುತ್ತಿದ್ದು, ನಿನ್ನೆ ನವಸಂಜಾತ ಮಗು ಮತ್ತು ಹೃದಯಾಘಾತದಿಂದ ವ್ಯಕ್ತಿಯೊಬ್ಬ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಮುಷ್ಕರ ನಿರತ ವೈದ್ಯರ ವಿರುದ್ಧ ಅಗತ್ಯ ಸೇವಾ ಕಾಯ್ದೆ ಎಸ್ಮಾವನ್ನು ಏಕೆ ಜಾರಿ ಮಾಡಿಲ್ಲ ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಹೈಕೋರ್ಟ್‌ನ ಹಿಂದಿನ ಆದೇಶ ಪಾಲಿಸದಿರಲು ಕಾರಣವೇನು? ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆಯನ್ನು ಯಾಕೆ ಹೂಡಬಾರದು ಎಂದು ಹೈಕೋರ್ಟ್ ಪೀಠ ಪ್ರಶ್ನಿಸಿದೆ.  ವೈದ್ಯಾಧಿಕಾರಿಗಳ ಸಂಘದ ಖುದ್ದು ಹಾಜರಿಗೆ ಕೋರ್ಟ್ ಆದೇಶ ನೀಡಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments