Publish Date: Thu, 29 Nov 2018 (17:03 IST)
Updated Date: Thu, 29 Nov 2018 (17:04 IST)
ಜಿಲ್ಲಾಧಿಕಾರಿ ಕಚೇರಿ ಎದುರು ಸೀಮೆಎಣ್ಣೆ ಹಿಡಿದು ಮಹಿಳೆಯರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಕೋಲಾರ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತರ ನೇಮಕಾತಿಯಲ್ಲಿ ಅಕ್ರಮ ಎಸಗಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಅನರ್ಹರಿಂದ ಲಂಚ ತೆಗೆದುಕೊಂಡು ಆಯ್ಕೆ ಮಾಡಿರುವ ಆರೋಪ ಕೇಳಿಬಂದಿದೆ.
ಹೀಗಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಸೀಮೆಎಣ್ಣೆ ಹಿಡಿದು ಪ್ರತಿಭಟನೆ ನಡೆಸಿದ ಮಹಿಳೆಯರು, ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು.
ನ್ಯಾಯ ಸಿಗದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಬೆದರಿಕೆ ಹಾಕಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು.