Publish Date: Thu, 25 Jun 2026 (20:05 IST)
Updated Date: Thu, 25 Jun 2026 (20:08 IST)
ಬೆಂಗಳೂರು: ಸ್ವಾತಂತ್ರ್ಯ ಹೋರಾಟಕ್ಕೆ ಯಾವ ಕೊಡುಗೆಯನ್ನು ನೀಡದಿರುವ ಸಂಘಟನೆಯನ್ನು ಪ್ರಶ್ನಿಸಿದರೆ ಬಿಜೆಪಿ ಬುಸುಗುಡುತ್ತದೆ ಎಂದು ಗೃಹಮಂತ್ರಿ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.
ಈ ಸಂಬಂಧ ಪ್ರಿಯಾಂಕ್ ಖರ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಫೋಸ್ಟ್ ಹಂಚಿಕೊಂಡಿದ್ದಾರೆ.
ನಾಗಪುರದಲ್ಲಿ ತ್ರಿವರ್ಣ ಧ್ವಜ ಹಾರಿಸಲು 52 ವರ್ಷ ಏಕೆ ಬೇಕಾಯಿತು, ಆರ್‌ಎಸ್‌ಎಸ್ ನಿಜವಾಗಿ ಯಾರ ಸಂವಿಧಾನಕ್ಕೆ ನಿಷ್ಠೆ ತೋರುತ್ತದೆ, ಬಾಬಾಸಾಹೇಬರ ಸಂವಿಧಾನಕ್ಕೋ, ಅಥವಾ ತಾವೇ ಬರೆಯಬೇಕಿತ್ತು ಎಂದು ಬಯಸುವ ಸಂವಿಧಾನಕ್ಕೋ ಎಂದು ಪ್ರಶ್ನಿಸಿದ್ದಕ್ಕೆ ಬಿಜೆಪಿ ಬುಸುಗುಡುತ್ತದೆ ಎಂದು ಹೇಳಿದರು.
ತಮ್ಮನ್ನು ತಾವು ನೋಂದಾಯಿಸಿಕೊಳ್ಳಲು, ತೆರಿಗೆ ಪಾವತಿಸಲು ಆರ್‌ಎಸ್‌ಎಸ್ ಏಕೆ ನಿರಾಕರಿಸುತ್ತದೆ ಎಂದು ಪ್ರಶ್ನಿಸಿದರು.
ಬಿಜೆಪಿ ಎಂದಿಗೂ ಆರ್‌ಎಸ್‌ಎಸ್‌ನ ಜೊತೆಗಾರನಲ್ಲ, ಬದಲಿಗೆ ಕೇವಲ ಆರ್‌ಎಸ್‌ಎಸ್‌ನ ಸಾಧನ ಆಗಿದೆ ಅಷ್ಟೇ. ಬಿಜೆಪಿಯ ಪ್ರತಿ ಬುಸುಗುಡುವಿಕೆ, ಅದರ ಬಾಲ ಯಾರ ಕೈಯಲ್ಲಿದೆ ಎಂಬುದನ್ನು ಖಚಿತಪಡಿಸುತ್ತದೆ ಎಂದು ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ