Select Your Language

Notifications

webdunia
webdunia
webdunia
webdunia

ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಪುತ್ತೂರು ಬಿಜೆಪಿ ನಾಯಕನ ಪುತ್ರನ ಪ್ರಕರಣದಲ್ಲಿ ಮೌನವೇಕೆ: ಪ್ರಿಯಾಂಕ್ ಖರ್ಗೆ

ಕಾಫ್ ಸಿರಪ್ ಪ್ರಕರಣ

Sampriya

ಬೆಂಗಳೂರು , ಸೋಮವಾರ, 14 ಜುಲೈ 2025 (19:50 IST)
Photo Credit X
ಬೆಂಗಳೂರು: 27 ಸಾವಿರ ಮೌಲ್ಯದ ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿ ಕರ್ನಾಟಕಯವರು ಅದಕ್ಕಿಂತ ಗಂಭೀರ ಪ್ರಕರಣಗಳನ್ನು ಎದುರಿಸುತ್ತಿರುವ ತಮ್ಮ ಪಕ್ಷದವರ ಬಗ್ಗೆ ಕ್ರಮ ಕೈಗೊಳ್ಳುವ ನೈತಿಕತೆ ತೋರುವುದು ಯಾವಾಗ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ. 

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಿಯಾಂಕ್ ಖರ್ಗೆ ಅವರು ಪ್ರಶ್ನೆ ಮಾಡಿದ್ದಾರೆ. 

ಸುಮಾರು 27 ಸಾವಿರ ರೂಪಾಯಿ ಮೌಲ್ಯದ ಕಾಫ್ ಸಿರಪ್ ದೊರಕಿದ ಹಿನ್ನೆಲೆಯಲ್ಲಿ ಕಲಬುರಗಿ ದಕ್ಷಿಣ ಮತ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಬಿಜೆಪಿ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 


ಈ ಪ್ರಕರಣದಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಪೊಲೀಸರು ಸ್ವತಂತ್ರರಿದ್ದಾರೆ, ಪ್ರಕರಣ ದಾಖಲಾಗುತ್ತಿದ್ದಂತೆಯೇ ಕಾಂಗ್ರೆಸ್ ಪಕ್ಷದಿಂದ ಅವರನ್ನು ಉಚ್ಚಾಟಿಸಲಾಗಿದೆ.
ಕಾಂಗ್ರೆಸ್ ಪಕ್ಷವಾಗಲಿ, ಸರ್ಕಾರವಾಗಲಿ ಇದನ್ನು ಸಮರ್ಥಿಸುವುದಿಲ್ಲ.

27 ಸಾವಿರ ಮೌಲ್ಯದ ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿ ಕರ್ನಾಟಕಯವರು ಅದಕ್ಕಿಂತ ಗಂಭೀರ ಪ್ರಕರಣಗಳನ್ನು ಎದುರಿಸುತ್ತಿರುವ ತಮ್ಮ ಪಕ್ಷದವರ ಬಗ್ಗೆ ಕ್ರಮ ಕೈಗೊಳ್ಳುವ ನೈತಿಕತೆ ತೋರುವುದು ಯಾವಾಗ?

ಪೋಕ್ಸೋ ಪ್ರಕರಣದ ಆರೋಪಿಯನ್ನು ಬಿಜೆಪಿ ಪಕ್ಷವು ಉಚ್ಚಾಟನೆ ಮಾಡುವುದು ಯಾವಾಗ?

ಪುತ್ತೂರಿನಲ್ಲಿ ಬಿಜೆಪಿ ನಾಯಕನ ಪುತ್ರನೊಬ್ಬ ಯುವತಿಯೊಬ್ಬರಿಗೆ ವಂಚಿಸಿ ಅತ್ಯಾಚಾರವೆಸಗಿದ್ದರ ಬಗ್ಗೆ ಕ್ರಮ ಕೈಗೊಳ್ಳದಿರುವುದು ಯಾವಾಗ?

ವಿಧಾನಸೌಧದ ಆವರಣದಲ್ಲೇ ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ, ಏಡ್ಸ್ ಇಂಜೆಕ್ಷನ್ ನೀಡಿದ ಶಾಸಕನನ್ನು ಪಕ್ಷದಿಂದ ಉಚ್ಚಾಟಿಸುವುದು ಯಾವಾಗ?

ಮಹಿಳಾ ಅಧಿಕಾರಿಗಳನ್ನು ಅವಮಾನಕರವಾಗಿ ನಿಂಧಿಸುವುದನ್ನೇ ಕಾಯಕ ಮಾಡಿಕೊಂಡಿರುವ ವಿಧಾನ ಪರಿಷತ್ ಸದಸ್ಯನ ಮೇಲೆ ಕ್ರಮ ಕೈಗೊಳ್ಳುವುದು ಯಾವಾಗ?

ಗಣಿ ಹಗರಣದಲ್ಲಿ ಪ್ರಕರಣಗಳನ್ನು ಎದುರಿಸುತ್ತಿರುವವರನ್ನು ಬಿಜೆಪಿ ಉಚ್ಚಾಟನೆ ಮಾಡುವುದು ಯಾವಾಗ

Share this Story:

Follow Webdunia kannada

ಮುಂದಿನ ಸುದ್ದಿ

ತಮಿಳುನಾಡು, 30 ವರ್ಷಗಳಿಂದ ಬೇಕಾಗಿದ್ದ ಮೋಸ್ಟ್ ವಾಟೆಂಡ್‌ ಭಯೋತ್ಪಾದಕರ ಬಂಧನ