Select Your Language

Notifications

webdunia
webdunia
webdunia
webdunia

ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ ಎಂದಾ ಸಾಹಿತಿ ಕುಂ.ವೀರಭದ್ರಪ್ಪ

Minister Madhu Bangarappa

Sampriya

ಬಾಗಲಕೋಟೆ , ಭಾನುವಾರ, 30 ಜೂನ್ 2024 (16:39 IST)
Photo Courtesy X
ಬಾಗಲಕೋಟೆ: ಕನ್ನಡ ಓದಲು, ಬರೆಯಲು ಬಾರದಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಬದಲಾಯಿಸಬೇಕೆಂದು ಎಂದು ಖ್ಯಾತ ಸಾಹಿತಿ ಕುಂ ವೀರಭದ್ರಪ್ಪ ಆಗ್ರಹಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನಿಂದ ನಗರದ ಅಂಬೇಡ್ಕರ್ ಭವನದಲ್ಲಿ ಶನಿವಾರ ಆಯೋಜಿಸಲಾಗಿದ್ದ 11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಇಂದು ಕನ್ನಡ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ ಎಂದು ಶಾಲೆಗಳನ್ನು ಮುಚ್ಚುವ ಪರಿಸ್ಥಿತಿಗೆ ಬಂದಿದೆ.  ಶಿಕ್ಷಣ ಸಚಿವರು ಇಂಗ್ಲಿಷ್ ಮಾಧ್ಯಮದಲ್ಲಿ ಕಲಿತಿದ್ದಾರೆ. ಅವರಿಗೆ ಕನ್ನಡ ಬರುವುದಿಲ್ಲ. ಅವರ ಕೂದಲು ನೋಡಿದರೆ ಭ್ರಮನಿರಸನವಾಗುತ್ತದೆ ಎಂದು ವ್ಯಂಗ್ಯವಾಡಿದರು.

ಇನ್ನೂ ಸಚಿವ ಮಧು ಅವರ ತಂದೆ ಬಂಗಾರಪ್ಪ ಅವರಿಗೆ ಕನ್ನಡ ಚೆನ್ನಾಗಿ ಗೊತ್ತಿತ್ತು. ಆದರೆ ಸಚಿವ ಮಧು ಅವರಿಗೆ ಕನ್ನಡ ಗೊತ್ತಿಲ್ಲ. ನಮ್ಮ ರಾಜಕಾರಣಿಗಳು ಕನ್ನಡ ಉಳಿಸುವ ಬಗ್ಗೆ ಮಾತನಾಡುತ್ತಾರೆ. ಅವರ ಮಕ್ಕಳು ಮಾತ್ರ ವಿದೇಶದಲ್ಲಿ ವ್ಯಾಸಂಗ ಮಾಡುತ್ತಾರೆ ಎಂದು ಆಕ್ರೋಶ ಹೊರಹಾಕಿದರು.

ಇನ್ನೂ ಶಿಕ್ಷಣ ಸಚಿವರಾಗಿರುವ ಮಧು ಬಂಗಾರಪ್ಪ ಅವರು ಸರ್ಕಾರಕ್ಕೆ ಕಪ್ಪು ಚುಕ್ಕೆಯಾಗಿದ್ದು, ಅವರನ್ನು ಸಚಿವ ಸ್ಥಾನದಿಂದ ಕೆಳಗಿಲಿಸಬೇಕು ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

30ನೇ ಸೇನಾ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ ಉಪೇಂದ್ರ ದ್ವಿವೇದಿ ಹಿನ್ನೆಲೆ ಇಲ್ಲಿದೆ