Publish Date: Sun, 10 Feb 2019 (18:36 IST)
Updated Date: Sun, 10 Feb 2019 (18:38 IST)
ಒಂದೆಡೆ ಯಡಿಯೂರಪ್ಪನವರ ಆಪರೇಷನ್ ಕಮಲದ ಆಡಿಯೋ ಚರ್ಚೆಯಾಗುತ್ತಿದ್ದರೆ ಮತ್ತೊಂದೆಡೆ ಬಿಜೆಪಿ ಈಗ ಸಿಎಂ ವಾಸ್ತವ್ಯದ ವಿಷಯ ಕೆದಕಿದೆ.
ಸ್ಟಾರ್ ಹೊಟೇಲ್ ನಲ್ಲಿ ವಾಸ ಮಾಡುತ್ತಾ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಡಳಿತ ನಡೆಸುತ್ತಿದ್ದಾರೆ. ಹೀಗಂತ ಬಿಜೆಪಿ ಗಂಭೀರವಾಗಿ ಆರೋಪ ಮಾಡಿದೆ.
ಕಲಬುರಗಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಸಿಎಂ ಸ್ಟಾರ್ ಹೊಟೇಲ್ ನಲ್ಲಿದ್ದುಕೊಂಡೇ ಆಡಳಿತ ನಡೆಸುತ್ತಿದ್ದಾರೆ. ಈ ಕುರಿತು ಶ್ವೇತ ಪತ್ರ ಹೊರಡಿಸಬೇಕೆಂದು ಒತ್ತಾಯಿಸಿದರು.
ಕುಮಾರಸ್ವಾಮಿಯವರು ಯಡಿಯೂರಪ್ಪನವರ ಹೆಸರು ಕೆಡಿಸುವ ಮೂಲಕ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುತ್ತಿದ್ದಾರೆ. ಚಲನಚಿತ್ರ ರಂಗ ಹಿನ್ನೆಲೆಯ ಸಿಎಂ, ಸಿಡಿ, ಕ್ಯಾಸೆಟ್ ಬಿಡುಗಡೆ ಕಾರ್ಯಕ್ರಮವನ್ನು ಸಿನಿಮಾ ರಂಗದಲ್ಲಿ ಮಾಡಿಕೊಳ್ಳುವುದು ಉತ್ತಮ ಎಂದು ಕಿಡಿಕಾರಿದರು.