Select Your Language

Notifications

webdunia
webdunia
webdunia
webdunia

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

MP Pradeep Eshwar

Sampriya

ಮೈಸೂರು , ಶುಕ್ರವಾರ, 24 ಅಕ್ಟೋಬರ್ 2025 (18:21 IST)
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಚಿಕ್ಕಬಳ್ಳಾಪುರ ಕಾಂಗ್ರೆಸ್​ ಶಾಸಕ ಪ್ರದೀಪ್​ ಈಶ್ವರ್​ ನಡುವಿನ ವಾಕ್ ಜೋರಾಗಿದೆ. ಪರಸ್ಪರ ಏಕವಚನದಲ್ಲೇ ಬೈದಾಡಿಕೊಳ್ಳುತ್ತಿದ್ದಾರೆ.

ಪ್ರತಾಪ ಸಿಂಹ ಟೀಕೆಗೆ ಪ್ರತಿಕ್ರಿಯಿಸಿದ ಪ್ರದೀಪ್ ಈಶ್ವರ್ ಅವರು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ತಮ್ಮ ತಾಯಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ "ಪ್ರದೀಪ್ ಈಶ್ವರ್ ಕತ್ತಲಲ್ಲಿ ಕಾಣಲ್ಲ, ಬೆಳಕಲ್ಲಿ ಹೊಳೆಯಲ್ಲ ಎಂದು ವಾಗ್ದಾಳಿ ನಡೆಸಿದರು.

ತಮ್ಮ ತಾಯಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಪ್ರದೀಪ್ ಈಶ್ವರ್ ಕತ್ತಲಲ್ಲಿ ಕಾಣಲ್ಲ, ಬೆಳಕಲ್ಲಿ ಹೊಳೆಯಲ್ಲ. ಮುಳ್ಳಂದಿ ಮುಖದ ಕರ್ನಾಟಕದ ಏಕೈಕ ಕಾಮಿಡಿ ಪೀಸ್. ನಮ್ಮ ತಂದೆ ವಯಸ್ಸಿನಲ್ಲಿ ಇದ್ದಾಗ ಚಿಕ್ಕಬಳ್ಳಾಪುರ ಕಡೆ ಬಂದಿದ್ರೆ ನೀನು ಸುಂದರವಾಗಿ ಹುಟ್ಟುತ್ತಿದ್ದೆ. ನನ್ನ ಬಗ್ಗೆ ಮಾತಾಡುವಾಗ ಎಚ್ಚರಿಕೆಯಿಂದರಬೇಕೆಂದು ಏಕವಚನದಲ್ಲೇ ಕಿಡಿ ಕಾರಿದ್ದರು. 

ಪ್ರದೀಪ್ ಈಶ್ವರ್​ಗೆ ಅವನ ಭಾಷೆಯಲ್ಲಿಯೇ ಉತ್ತರ ಹೇಳುತ್ತಿರುವುದಕ್ಕೆ ಕರ್ನಾಟಕದ ಜನರ ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.

ಪ್ರತಾಪ್ ಸಿಂಹ ಟೀಕೆಗೆ ಪ್ರತಿಕ್ರಿಯಿಸಿದ ಶಾಸಕ ಪ್ರದೀಪ್ ಈಶ್ವರ್ ಅವರು, ನನ್ನ ಕ್ಷೇತ್ರದಲ್ಲಿ ನಾನು 2,500 ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿದ್ದೇನೆ. ಎಷ್ಟು ಜನ ಗೌಡರ ಮಕ್ಕಳಿಗೆ ನೀನು ನೆರವಾಗಿದ್ದೀಯಾ ಎಂದು ಪ್ರಶ್ನೆ ಮಾಡಿದರು. 

ನಾನು ಕತ್ತಲಲ್ಲಿ ಕಾಣಲ್ವಂತೆ, ಅಯೋಗ್ಯ, ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕುತ್ತಾನೋ ಗೊತ್ತಿಲ್ಲ. ಪ್ರತಾಪ ನಾನು ಹಾಗಲ್ಲ. ಆತನಿಗೆ 50-50 ಬಿಸ್ಕತ್ ಫೆವರೇಟ್​ ಎಂದು ಪ್ರದೀಪ್​ ಈಶ್ವರ್​ ವ್ಯಂಗ್ಯವಾಡಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ