Select Your Language

Notifications

webdunia
webdunia
webdunia
webdunia

ಕಾವೇರಿಗೆ ತೋರಿದ ಕಾಳಜಿ ಮಹದಾಯಿಗೆ ಯಾಕಿಲ್ಲ: ಎನ್‌.ಎಚ್‌.ಕೋನರೆಡ್ಡಿ

ಕಾವೇರಿಗೆ ತೋರಿದ ಕಾಳಜಿ ಮಹದಾಯಿಗೆ ಯಾಕಿಲ್ಲ: ಎನ್‌.ಎಚ್‌.ಕೋನರೆಡ್ಡಿ
ಹುಬ್ಬಳ್ಳಿ , ಬುಧವಾರ, 28 ಸೆಪ್ಟಂಬರ್ 2016 (19:37 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಹೇಗೆ ವಿಶೇಷ ಅಧಿವೇಶನ ನಡೆಸುತ್ತೋ, ಅದೇ ಮಾದರಿಯಲ್ಲಿ ಕಳಸಾ ಬಂಡೂರಿ ಹಾಗೂ ಮಹದಾಯಿ ವಿಚಾರದಲ್ಲೂ ವಿಶೇಷ ಅಧಿವೇಶನ ಕರೆಯಲಿ ಎಂದು ಜೆಡಿಎಸ್ ಶಾಸಕ ಎನ್‌.ಎಚ್‌.ಕೋನರೆಡ್ಡಿ ಆಗ್ರಹಿಸಿದ್ದಾರೆ.
 
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ರಾಜ್ಯ ಸರಕಾರ ವಿಶೇಷ ವಿಧಾನ ಮಂಡಲ ಅಧಿವೇಶನ ಕರೆದಿದ್ದು ಸ್ವಾಗತಾರ್ಹ. ಆದರೆ, ಕಳಸಾ ಬಂಡೂರಿ ಹಾಗೂ ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಸುವರ್ಣಸೌಧದಲ್ಲಿ 2 ದಿನಗಳ ವಿಶೇಷ ಅಧಿವೇಶನ ಕರೆಯಲಿ. ಈ ಕುರಿತು ಈಗಾಗಲೇ ಸ್ವೀಕರ್ ಕೆ.ಬಿ.ಕೋಳಿವಾಡ್ ಅವರಿಗೆ ಪತ್ರ ಬರೆದಿದ್ದೇನೆ ಎಂದು ಸ್ಪಷ್ಟಪಡಿಸಿದರು. 
 
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ನಾಳೆ ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾಭಾರತಿ ಮಧ್ಯಸ್ಥಿಕೆಯಲ್ಲಿ ನಡೆಯುವ ಸಭೆಯಲ್ಲಿ ಕಳಸಾ ಬಂಡೂರಿ ಹಾಗೂ ಮಹದಾಯಿ ವಿಷಯವನ್ನು ಸಹ ಚರ್ಚಿಸಬೇಕು. ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಸಾಕಷ್ಟು ಪ್ರತಿಭಟನೆ ನಡೆದಿದೆ. ಆದರೆ, ರಾಜ್ಯ ಸರಕಾರ ಕಾವೇರಿ ವಿವಾದದಲ್ಲಿ ತೋರಿಸಿದ ಮುತುವರ್ಜಿಯನ್ನು ಮಹದಾಯಿ ವಿವಾದದಲ್ಲಿ ತೋರುತ್ತಿಲ್ಲ ಎಂದು ದೂರಿದರು. 
 
ಮಹದಾಯಿ ವಿಚಾರದಲ್ಲಿ ಕರ್ನಾಟಕ ಸೇರಿದಂತೆ ಗೋವಾ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳ ಜೊತೆ ಮಾತುಕತೆಗೆ ಮುಂದಾಗಿಲ್ಲ. ವಿವಾದದಲ್ಲಿ ಪ್ರಧಾನಿ ಮೋದಿ ಮಧ್ಯ ಪ್ರವೇಶ ಮಾಡುವಂತೆ ಹಲವು ಬಾರಿ ಮನವಿ ಮಾಡಲಾಗಿದೆ. ಆದರೂ ಪ್ರಧಾನಿ ಮೌನ ಮುರಿಯುತ್ತಿಲ್ಲ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವೆ ಉಮಾಭಾರತಿ ಬದಲಿಗೆ ಮೋದಿ ಮಧ್ಯಸ್ಥಿಕೆ ವಹಿಸಬೇಕಾಗಿತ್ತು: ಡಿಎಂಕೆ