ಕಾವೇರಿಯಂತೆ ಮಹದಾಯಿ ವಿಚಾರಕ್ಕೂ ಸ್ಪಂದಿಸಬೇಕು: ಎನ್‌.ಎಚ್.ಕೋನರೆಡ್ಡಿ

Webdunia
ಮಂಗಳವಾರ, 11 ಅಕ್ಟೋಬರ್ 2016 (17:43 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸ್ಪಂದಿಸಿದ ಹಾಗೇ ರಾಜ್ಯ ಸರಕಾರ ಮಹದಾಯಿ ವಿವಾದಕ್ಕೂ ಸ್ಪಂದಿಸಬೇಕು ಎಂದು ಜೆಡಿಎಸ್ ಶಾಸಕ ಎನ್‌.ಎಚ್.ಕೋನರೆಡ್ಡಿ ಹಾಗೂ ಲೋಕನಾಥ್ ಹೆಬಸೂರು ಜಂಟಿ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿಕೊಂಡರು.
 
ಕಳಸಾ ಬಂಡೂರಿ ಹಾಗೂ ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಹುಬ್ಬಳ್ಳಿಯಲ್ಲಿ ಸಭೆ ಕರೆಯಲಾಗಿತ್ತು. 
 
ಸಭೆಯ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹದಾಯಿ ನದಿ ನೀರು ಹಂಚಿಕೆ ವಿವಾದವನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಕಾವೇರಿ ವಿವಾದಕ್ಕೆ ಸ್ಪಂದಿಸಿದ ಹಾಗೇ ಮಹದಾಯಿ ವಿವಾದಕ್ಕೂ ಸ್ಪಂದಿಸಬೇಕು, ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಿ ವಿವಾದವನ್ನು ಇತ್ಯರ್ಥಗೊಳಿಸಬೇಕು ಎಂದು ಆಗ್ರಹಿಸಿದರು.
 
ಕಾವೇರಿ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಹೇಗೆ ವಿಶೇಷ ವಿಧಾನ ಮಂಡಲ ಅಧಿವೇಶನ ಕರೆಯಲಾಗಿತ್ತೋ ಹಾಗೇ ಮಹದಾಯಿ ವಿಚಾರದಲ್ಲೂ ವಿಶೇಷ ಅಧಿವೇಶನ ಕರೆದು ಚರ್ಚಿಸಲಿ. ಹಾಗೂ ಮಹದಾಯಿ ಹೋರಾಚಗಾರರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲಿ ಒತ್ತಾಯಿಸಿದರು.
 
ಮಹದಾಯಿ ವಿಚಾರವಾಗಿ ಅಕ್ಟೋಬರ್ 21 ರಂದು ಮೂರು ರಾಜ್ಯದ ಮುಖ್ಯಮಂತ್ರಿಗಳ ಸಭೆ ಕರೆದಿರುವುದು ಸ್ವಾಗತಾರ್ಹ ಎಂದು  ಜೆಡಿಎಸ್ ಶಾಸಕ ಎನ್‌.ಎಚ್.ಕೋನರೆಡ್ಡಿ ಹಾಗೂ ಲೋಕನಾಥ್ ಹೆಬಸೂರು ತಿಳಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments