Publish Date: Wed, 03 Jul 2019 (17:50 IST)
Updated Date: Wed, 03 Jul 2019 (17:52 IST)
ಲೋಕಸಭೆ ಚುನಾವಣೆ ಫಲಿತಾಂಶ ಬಳಿಕ ಇದೀಗ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜಕೀಯದ ಮಹತ್ವದ ಬೆಳವಣಿಗೆಯೊಂದರಲ್ಲಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆಯನ್ನ ಸಲ್ಲಿಸಿದ್ದಾರೆ. ರಾಹುಲ್ ನೀಡಿರುವ ರಾಜೀನಾಮೆಯನ್ನು ಸ್ವೀಕರಿಸಿ, ಅಂಗೀಕರಿಸಬೇಕಾದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಇದೆ.
ರಾಹುಲ್ ಗಾಂಧಿ ರಾಜೀನಾಮೆ ನೀಡಬಾರದೆಂದು ಕೈ ಪಡೆಯ ನಾಯಕರು ಒತ್ತಾಯ ಮಾಡುತ್ತಲೇ ಇದ್ದರು. ಆದರೆ ಲೋಕಸಭೆ ಚುನಾವಣೆಯಲ್ಲಿ ಕೈ ಪಡೆ ಮತ್ತೆ ಹೀನಾಯ ಸೋಲು ಕಂಡಿದೆ. ಹೀಗಾಗಿ ಸೋಲಿನ ಹೊಣೆ ಹೊತ್ತು ರಾಹುಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಂದಿನ ವಾರದಲ್ಲಿ ಕಾಂಗ್ರೆಸ್ ಗೆ ನೂತನ ಸಾರಥಿ ನೇಮಕ ಮಾಡುವ ಸಾಧ್ಯತೆಯಿದೆ.